ಬೆಂಗಳೂರು ಗ್ರಾಮಾಂತರ ಜಿಲ್ಲೆ: ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಬೆಂಗಳೂರು ಮತ್ತು ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮ ಬೆಂಗಳೂರು ಇವರ ಪ್ರಾಯೋಜಕತ್ವದಲ್ಲಿ ಕರ್ನಾಟಕ ಉದ್ಯಮಶೀಲತಾ ಅಭಿವೃದ್ಧಿ ಕೇಂದ್ರ(ಸಿಡಾಕ್) ಇವರು ಸ್ವಂತ ಉದ್ಯೋಗವನ್ನು ಸ್ಥಾಪಿಸಲು ಇಚ್ಚಿಸುವವರಿಗಾಗಿ ದೇವನಹಳ್ಳಿ ಟೌನ್ ನಲ್ಲಿ 10 ದಿನಗಳ ಉದ್ಯಮಶೀಲತಾಭಿವೃದ್ಧಿ ಕಾರ್ಯಕ್ರಮವನ್ನು ಜುಲೈ ಮೊದಲ ವಾರದಲ್ಲಿ ಹಮ್ಮಿಕೊಳ್ಳಲಾಗುತ್ತಿದೆ.
ಕಾರ್ಯಕ್ರಮದಲ್ಲಿ ಸ್ವಯಂ ಉದ್ಯಮಗಳ ಬಗ್ಗೆ ಮಾಹಿತಿ, ಉದ್ಯಮಶೀಲತೆ, ಯಶಸ್ವಿ ಉದ್ಯಮಶೀಲರ ಗುಣಲಕ್ಷಣಗಳು, ನಾಯಕತ್ವದ ಗುಣಲಕ್ಷಣಗಳು, ಉದ್ಯಮವನ್ನು ಆಯ್ಕೆ ಮಾಡುವ ವಿಧಾನ, ವ್ಯಾಪಾರೋದ್ಯಮಗಳ ಅವಕಾಶಗಳು, ಉದ್ಯಮಗಳನ್ನು ಪ್ರಾರಂಭಿಸುವ ಹಂತಗಳು, ಸ್ವಯಂ ಉದ್ಯೋಗಕ್ಕೆ ಇರುವ ಸರ್ಕಾರದ ಯೋಜನೆಗಳು, ಬ್ಯಾಂಕ್ ವ್ಯವಹಾರ ಮಾಡುವ ಬಗ್ಗೆ, ಸಾಲ ಮತ್ತು ಹಣಕಾಸು ಮತ್ತು ಹಣಕಾಸೇತರ ಸೌಲಭ್ಯಗಳ ಬಗ್ಗೆ, ಲೆಕ್ಕ ಪತ್ರ ನಿರ್ವಹಣೆ, ಯೋಜನಾ ವರದಿ ತಯಾರಿಕೆ, ಸಾಲ ಸೌಲಭ್ಯಕ್ಕಾಗಿ ಅರ್ಜಿ ಸಲ್ಲಿಸುವಲ್ಲಿ ಸಹಾಯ ನೀಡುವುದು ಹಾಗೂ ಈಗಾಗಲೇ ಸಿಡಾಕ್ ಮುಖಾಂತರ ತರಬೇತಿ ಪಡೆದು ಉದ್ಯಮಗಳನ್ನು ಯಶಸ್ವಿಯಾಗಿ ನಡೆಸಿಕೊಂಡು ಹೋಗುತ್ತಿರುವ ಉದ್ಯಮಶೀಲರ ಅನುಭವ ಹಂಚಿಕೆ ಮತ್ತು ಸಂಬಂಧಪಟ್ಟ ಇತ್ಯಾದಿ ವಿಷಯಗಳ ಬಗ್ಗೆ ಅನುಭವಿ ಅತಿಥಿ ಬೋಧಕರಿಂದ ಉಪನ್ಯಾಸ/ಮಾಹಿತಿ ನೀಡಲಾಗುವದು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು 18 ವರ್ಷ ದಿಂದ 40 ವರ್ಷ ವಯಸ್ಸಿನವರಾಗಿರಬೇಕು ಹಾಗೂ ಎಸ್.ಎಸ್.ಎಲ್.ಸಿ. ಪಾಸಾಗಿರಬೇಕು. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗದವರಿಗೆ ಆದ್ಯತೆ ನೀಡಲಾಗುವುದು. ಅರ್ಜಿಯನ್ನು ಈ ಕೆಳಕಂಡ ವಿಳಾಸದಲ್ಲಿ ಕಛೇರಿ ವೇಳೆಯಲ್ಲಿ ಪಡೆಯಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಬೇಕಾದ ವಿಳಾಸ ಜಂಟಿ ನಿರ್ದೇಶಕರು, ಸಿಡಾಕ್, ಜಿಲ್ಲಾ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ, ಜಿಲ್ಲಾ ಕಛೇರಿ: ಜಿಲ್ಲಾ ಕೌಶಲ್ಯಾಭಿವೃದ್ಧಿಯವರ ಕಚೇರಿ ಕೊಠಡಿ ಸಂಖ್ಯೆ : 132, 1ನೇ ಮಹಡಿ, ಜಿಲ್ಲಾಡಳಿತ ಭವನ, ದೇವನಹಳ್ಳಿ, ಬೆಂಗಳೂರು ಗ್ರಾಮಾಂತರ ಜಿಲ್ಲೆ. ಇಲ್ಲಿಗೆ 30 ಜೂನ್. 2024 ರ ಒಳಗಾಗಿ ಅಗತ್ಯ ದಾಖಲೆಗಳೊಂದಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬೇಕು.ಹೆಚ್ಚಿನ ಮಾಹಿತಿಗಾಗಿ ಮೋಬೈಲ್ ಸಂಖ್ಯೆ 9353438881 ಇಲ್ಲಿಗೆ ಕರೆ ಮಾಡಬಹುದಾಗಿದೆ ಎಂದು ಸಿಡಾಕ್ ಸಂಸ್ಥೆಯ ಬೆಂಗಳೂರು ಗ್ರಾಮಾಂತರ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.