ತಿ.ನರಸೀಪುರ: ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘವು ರಾಜ್ಯ ಮಟ್ಟದ ದೊಡ್ಡ ಸಂಘಟನೆಯಾಗಿದ್ದು, ಅದನ್ನು ಪ್ರತಿನಿಧಿಸುವ ಪ್ರತಿಯೊಬ್ಬ ಪದಾಧಿಕಾರಿಯ ಜವಾಬ್ದಾರಿಯೂ ಅಷ್ಟೇ ಮಹತ್ವದ್ದಾಗಿದೆ ಎಂದು ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಶಿವಮೂರ್ತಿ ಹೇಳಿದರು.
ಪಟ್ಟಣದ ಗುರುಭವನದಲ್ಲಿ ನಡೆದ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲ್ಲೂಕು ಶಾಖೆಯ 2026-2031ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಶಿಕ್ಷಕರ ಸಂಘದ ಪದಾಧಿಕಾರಿಗಳು ತಮ್ಮ ವೃತ್ತಿ ಜೀವನದ ಜವಾಬ್ದಾರಿಗಳ ಜೊತೆಗೆ ಸಂಘದ ಹೊಣೆಗಾರಿಕೆ ಯನ್ನು ಸಮರ್ಥವಾಗಿ ನಿಭಾಯಿಸಬೇಕಾಗಿದೆ.ಎಂದರು. ಕರ್ತವ್ಯ ನಿರ್ವಹಣೆಯ ಸ್ಥಳದಲ್ಲಿ ಅಥವಾ ಇತರ ಸಂದರ್ಭಗಳಲ್ಲಿ ಶಿಕ್ಷಕರು ಸಮಸ್ಯೆಗಳನ್ನು ಎದುರಿಸಿದಾಗ, ಅವುಗಳನ್ನು ಇಲಾಖೆಯ ಹಿರಿಯ ಅಧಿಕಾರಿಗಳ ಗಮನಕ್ಕೆ ತರಲು ಕೆಲವರು ಹಿಂಜರಿಯುತ್ತಾರೆ. ಅಂತಹ ಸಂದರ್ಭಗಳಲ್ಲಿ ಸಂಘದ ಪದಾಧಿಕಾರಿಗಳು ಶಿಕ್ಷಕರ ಬೆನ್ನಿಗೆ ನಿಂತು ಸಮಸ್ಯೆಗಳಿಗೆ ಪರಿಹಾರ ಒದಗಿಸುವ ಕೆಲಸ ಮಾಡಬೇಕು ಎಂದು ಸಲಹೆ ನೀಡಿದರು.
ನೂತನ ಪದಾಧಿಕಾರಿಗಳು ಶಿಕ್ಷಕರ ಜ್ವಲಂತ ಸಮಸ್ಯೆಗಳ ಪರಿಹಾರಕ್ಕಾಗಿ ಸದಾ ಸ್ಪಂದನಾಶೀಲರಾಗಿರಬೇಕು. ಅಧಿಕಾರ ಎಂಬುದು ಕೇವಲ ಹುದ್ದೆಯಲ್ಲ, ಅದು ಒಂದು ಜವಾಬ್ದಾರಿಯ ಕೆಲಸವಾಗಿದೆ ಎಂದರು. ಇತ್ತೀಚಿನ ದಿನಗಳಲ್ಲಿ ಪೋಷಕರು ಖಾಸಗಿ ಶಾಲೆಗಳತ್ತ ಹೆಚ್ಚು ಮುಖ ಮಾಡುತ್ತಿರುವ ಹಿನ್ನೆಲೆಯಲ್ಲಿ, ಸರ್ಕಾರಿ ಶಾಲೆಗಳಲ್ಲಿಯೂ ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ನೀಡುವ ಮೂಲಕ ಸಾರ್ವಜನಿಕರಲ್ಲಿ ವಿಶ್ವಾಸ ಹೆಚ್ಚಿಸಬೇಕಾಗಿದೆ. ಈ ನಿಟ್ಟಿನಲ್ಲಿ ಶಿಕ್ಷಕರ ಸಂಘವು ಸಕ್ರಿಯವಾಗಿ ಕಾರ್ಯನಿರ್ವಹಿಸಬೇಕು ಎಂದರು.
ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಎಂ ವಿ ಶಿವಶಂಕರಮೂರ್ತಿ ಮಾತನಾಡಿ ನೂತನ ಪದಾಧಿಕಾರಿಗಳು. ಶಿಕ್ಷಕರ ಸಮಸ್ಯೆ ಬಗೆಹರಿಸಲು ಸದಾ ಸಿದ್ಧರಿರಬೇಕು. ಆವಾಗಲೇ ಶಿಕ್ಷಕರುಗಳು ನಮಗೆ ಮತ ನೀಡಿದಕ್ಕೆ ಸಾರ್ಥಕ.ನೂತನ ಪದಾಧಿಕಾರಿಗಳು ಶಿಕ್ಷಕರುಗಳ ಜ್ವಲಂತ ಸಮಸ್ಯೆ ಬಂದಾಗ ಜೊತೆಯಲ್ಲಿದ್ದು ಬಗೆಹರಿಸಬೇಕು. ನಿಮ್ಮ ವ್ಯಾಪ್ತಿಯಲ್ಲಿ ಬಗೆಹರಿದಿದ್ದಾಗ ನಿಮ್ಮ ಜೊತೆ ಸದಾ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಇರುತ್ತದೆ ಎಂದರು. ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲ್ಲೂಕು ಶಾಖೆಗೆ ನೂತನವಾಗಿ ಆಯ್ಕೆಯಾದ ಜಿಲ್ಲಾ ಖಜಾಂಚಿ ಮಲ್ಲಣ್ಣ,ತಾಲೂಕು ಅಧ್ಯಕ್ಷ ಗಜೇಂದ್ರ ಎ., ಉಪಾಧ್ಯಕ್ಷ ಸಿ. ಮಹದೇವಸ್ವಾಮಿ,ಮಹಿಳಾ ಉಪಾಧ್ಯಕ್ಷೆ ಅಕ್ಕಮಹಾದೇವಿ, ಪ್ರಧಾನ ಕಾರ್ಯದರ್ಶಿ ರೇವಣ್ಣ, ಖಜಾಂಚಿ ಸಿದ್ದಮಲ್ಲಪ್ಪ ಜಿ., ಸಹ ಕಾರ್ಯದರ್ಶಿ ಕಿಕ್ಕೇರಿ ಶೆಟ್ಟಿ ಸಿ., ಮಹಿಳಾ ಸಹ ಕಾರ್ಯದರ್ಶಿ ನಂದಿನಿ ಎಸ್., ಸಂಘಟನಾ ಕಾರ್ಯದರ್ಶಿ ಸುರೇಶ್ ಸಿ., ಮಹಿಳಾ ಸಂಘಟನಾ ಕಾರ್ಯದರ್ಶಿ ಎಂ.ವೈ. ಜೀನತ್ ಅವರನ್ನು ಸನ್ಮಾನಿಸಿ ಅಭಿನಂದಿಸಲಾಯಿತು.
ಕಾರ್ಯಕ್ರಮದಲ್ಲಿ ತಾಲ್ಲೂಕು ಪ್ರಾಥಮಿಕ ಶಿಕ್ಷಕರ ಸಂಘದ ನಿರ್ದೇಶಕರಾದ ಸುಬ್ರಹ್ಮಣ್ಯ, ಚಂದ್ರಕಲಾ, ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಎಂ.ವಿ. ಶಿವಶಂಕರ್ ಮೂರ್ತಿ, ಕಾರ್ಯದರ್ಶಿ ಸೋಸಲೆ ನಾಗೇಶ್, ಬಿಆರ್ಸಿ ನಾಗೇಶ್, ಉತ್ತಂಬಳ್ಳಿ ನಾಗರಾಜ್, ಬಿಸಿಊಟ ಸಹಾಯಕ ನಿರ್ದೇಶಕ ಪುಟ್ಟಸ್ವಾಮಿ, ನಿಕಟಪೂರ್ವ ಅಧ್ಯಕ್ಷ ಸುಬ್ಬಣ್ಣ, ಪ್ರಧಾನ ಕಾರ್ಯದರ್ಶಿ ಪುಟ್ಟಸ್ವಾಮಿ, ಸಿದ್ದರಾಜಪ್ಪ, ಪ್ರಕಾಶ್, ಶಿಕ್ಷಕರುಗಳಾದ ಸಿದ್ದರಾಜು, ಕೆ ಪಿ ಮಹದೇವಸ್ವಾಮಿ, ದಾಕ್ಷಾಯಿಣಿ, ಸೇರಿದಂತೆ ಹಲವು ಗಣ್ಯರು,ಶಿಕ್ಷಕರು ಉಪಸ್ಥಿತರಿದ್ದರು.
ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ ಪದಗ್ರಹಣ



