ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಸದೃಢವಾಗಿ ಸಂಘಟಿಸಿ ಮುಂದಿನ ಚುನಾವಣೆಯಲ್ಲಿ ಮತ್ತೆ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಮುಖಂಡರು ಮುಂದಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಜಿಲ್ಲಾ ಅಧ್ಯಕ್ಷರು ಮತ್ತು ಪದಾಧಿಕಾರಿಗಳನ್ನು ಪುನರ್ ನೇಮಕ ಮಾಡಲು ಯತ್ನ ನಡೆದಿದ್ದು, ನೂತನ ಜಿಲ್ಲಾಧ್ಯಕ್ಷರನ್ನು ಆಯ್ಕೆ ಮಾಡಲು ಚಿಂತನೆ ನಡೆಯುತ್ತಿದೆ. ಜಿಲ್ಲಾ ಮಟ್ಟದಲ್ಲಿಯೇ ಜಿಲ್ಲಾಧ್ಯಕ್ಷರನ್ನು ನೇಮಿಸಲು ಮುಂದಾಗಿರುವ ಪಕ್ಷದ ವರಿಷ್ಠರು ಈ ಹಿನ್ನೆಲೆಯಲ್ಲಿ ಅಧ್ಯಕ್ಷರುಗಳ ಆಯ್ಕೆಗೆ ಸಮರ್ಥರನ್ನು ನೇಮಿಸಲು ಹುಡುಕಾಟ ನಡೆದಿದೆ. ಸಮರ್ಥರನ್ನು ಮತ್ತು ಪಕ್ಷಕ್ಕಾಗಿ ಶ್ರಮಿಸುವರ ಹೆಸರನ್ನು ಸೂಚಿಸಲು ಜಿಲ್ಲಾ ಮಟ್ಟದಲ್ಲಿ ಪಕ್ಷದಿಂದಲೇ ವೀಕ್ಷಕರನ್ನು ನೇಮಿಸಲು ಸಿದ್ಧತೆ ನಡೆದಿದೆ.



