ಬೆಂಗಳೂರು: ಹೆಣ್ಣೂರು ಪೊಲೀಸರು ಸಾರ್ವಜನಿಕರನ್ನು ಮಾರಕಾಸ್ತ್ರಗಳಿಂದ ಬೆದರಿಸಿ ದರೋಡೆ ಮಾಡುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ಬಂಧಿಸಿ ಆರುವರೆ ಲಕ್ಷ ರೂಪಾಯಿ ಬೆಲೆಬಾಳುವ ಚಿನ್ನದ ಸರಗಳನ್ನು ವಶಪಡಿಸಿಕೊಂಡಿರುತ್ತಾರೆ.
ಆರೋಪಿಗಳಾದ ಜಯಶೀಲನ ಡೇವಿಡ್ 26 ಮತ್ತು ಸ್ಯಾಮ್ಸಂಗ್ ಸಾಲಮನ್ 19 ರವರುಗಳನ್ನು ಬಂಧಿಸಿ ಏಪ್ರಿಲ್ 16ರಂದು ಬೆಳಿಗ್ಗೆ ಕೆಂಪೇಗೌಡ ರಸ್ತೆಯಲ್ಲಿ ವಾಯು ವಿಹಾರ ಮಾಡುತ್ತಿದ್ದ ವ್ಯಕ್ತಿಯನ್ನು ಮಾರಕ ಆಸ್ತ್ರಗಳಿಂದ ಬೆದರಿಸಿ 38 ಗ್ರಾಂ ತೂಕದ ಚಿನ್ನದ ಸರವನ್ನು ದರೋಡೆ ಮಾಡಿದ್ದರು.



