ಅಯೋಧ್ಯೆ: ಜನವರಿ 22ರಂದು ರಾಮ ಮಂದಿರದ `ಪ್ರಾಣ ಪ್ರತಿಷ್ಠಾ’ಸಮಾರಂಭಕ್ಕೆ ಬಿಗಿ ಭದ್ರತೆಯಕ್ರಮಗಳನ್ನು ಕೈಗೊಳ್ಳಲಾಗಿದ್ದು, ಉತ್ತರ ಪ್ರದೇಶದ ಭಯೋತ್ಪಾದನಾ ನಿಗ್ರಹ ದಳ ನಿನ್ನೆ ಅಯೋಧ್ಯೆಯಲ್ಲಿಮೂವರು ಅನುಮಾನಾಸ್ಪದ ವ್ಯಕ್ತಿಗಳನ್ನು ಬಂಧಿಸಿದೆ.
ಉತ್ತರ ಪ್ರದೇಶದ ವಿಶೇಷ ಪೊಲೀಸ್ ಮಹಾನಿರ್ದೇಶಕ ಪ್ರಶಾಂತ್ ಕುಮಾರ್ ಅವರು, ಅಯೋಧ್ಯಾ ಜಿಲ್ಲೆಯಲ್ಲಿ ರಾಜ್ಯ ಭಯೋತ್ಪಾದನಾ ನಿಗ್ರಹ ದಳವು ಮೂವರು ಅನುಮಾನಾಸ್ಪದ ವ್ಯಕ್ತಿಗಳನ್ನು ವಶಕ್ಕೆ ಪಡೆದಿದೆ. ಈ ಶಂಕಿತರನ್ನು ವಿಚಾರಣೆ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ.
“ರಾಜ್ಯ ಸರ್ಕಾರ ಮತ್ತು ಪೊಲೀಸ್ ಪ್ರಧಾನ ಕಚೇರಿಯ ಸೂಚನೆಗಳ ಮೇರೆಗೆ ನಡೆಸುತ್ತಿರುವ ತಪಾಸಣೆ ಅಭಿಯಾನದ ಭಾಗವಾಗಿ, ಅಯೋಧ್ಯೆ ಜಿಲ್ಲೆಯಲ್ಲಿ ಉತ್ತರ ಪ್ರದೇಶದ ಎಟಿಎಸ್ ಮೂವರು ಅನುಮಾನಾಸ್ಪದ ವ್ಯಕ್ತಿಗಳನ್ನು ವಶಕ್ಕೆ ತೆಗೆದುಕೊಂಡಿದೆ. ಶಂಕಿತರನ್ನು ವಿಚಾರಣೆ ನಡೆಸಲಾಗುತ್ತಿದೆ. ಇಲ್ಲಿಯವರೆಗೆ, ಯಾವುದೇ ಭಯೋತ್ಪಾದಕ ಸಂಘಟನೆಯೊಂದಿಗೆ ಅವರ ಸಂಪರ್ಕ ಬೆಳಕಿಗೆ ಬಂದಿಲ್ಲ” ಎಂದು ಹೇಳಿದ್ದಾರೆ.