ದೇವನಹಳ್ಳಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ವಿವಿಧ ಸರ್ಕಾರಿ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆ ಮಾಡಲು ಮಾರ್ಚ್ 11 ರಂದು ದೇವನಹಳ್ಳಿಗೆ ಆಗಮಿಸಲಿದ್ದಾರೆ.
ಈ ಸಂಬಂಧ ಇಂದು ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರ ನೇತೃತ್ವದಲ್ಲಿ ಜಿಲ್ಲಾಮಟ್ಟದ ಪೂರ್ವಭಾವಿ ಸಭೆ ನಡೆಸಲಾಯಿತು.
ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ, ಜಿಲ್ಲಾಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಕೆ.ಎನ್ ಅನುರಾಧ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ದೇವನಹಳ್ಳಿ ತಾಲ್ಲೂಕು ತಹಶೀಲ್ದಾರ್ ಶಿವರಾಜ್, ಕಾರ್ಯ ನಿರ್ವಾಹಕ ಅಧಿಕಾರಿ ಶ್ರೀನಾಥ್ ಗೌಡ, ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು, ವಿವಿಧ ಮುಖಂಡರು ಉಪಸ್ಥಿತರಿದ್ದರು.