ಮುಂಬೈ: ಆಶಾ ಭೋಸ್ಲೆ ಅವರು ಬರೋಬ್ಬರಿ 80 ವರ್ಷದ ತಮ್ಮ ಗಾಯನದ ಬದುಕನ್ನು ತೊರೆದು, ಹಾಡು ನಿಲ್ಲಿಸಿದ್ದಾರೆ. ಅವರ ಕೋಟ್ಯಂತರ ಅಭಿಮಾನಿಗಳಿಗೆ ಈಗ ಬರೀ ಶೋಕಗೀತೆಯೇ ಕೇಳಿಸುತ್ತಿದೆ. ಇಂದು ಸಂಜೆ 4 ಗಂಟೆಗೆ ಮುಂಬೈನ ಶಿವಾಜಿ ಪಾರ್ಕ್ನಲ್ಲಿ ಆಶಾ ಭೋಸ್ಲೆ ಅವರ ಅಂತ್ಯಕ್ರಿಯೆ ನಡೆಯಲಿದೆ.
ಎಂಟು ದಶಕಗಳಿಗೂ ಹೆಚ್ಚು ಕಾಲ ಭಾರತೀಯ ಸಿನಿಮಾದ ಸಂಗೀತ ಲೋಕದ ಉಸಿರಾಗಿದ್ದ ಸ್ವರ ಸಾಮ್ರಾಜ್ಞಿ ಆಶಾ ಭೋಸ್ಲೆ ಅವರು 10ನೇ ವಯಸ್ಸಿಗೆ ಹಾಡಲು ಶುರು ಮಾಡಿದ್ದರು. ವಿವಿಧ ಭಾಷೆಗಳಲ್ಲಿ ಬರೋಬ್ಬರಿ 12 ಸಾವಿರಕ್ಕೂ ಹೆಚ್ಚು ಹಾಡುಗಳನ್ನು ಹಾಡಿದ್ದಾರೆ. 8 ದಶಕಗಳ ಸುಂದರ ಬದುಕಿನ ಯಾನ ಮುಗಿಸಿದ ಸ್ವರ ಸಾಮ್ರಾಜ್ಞಿ ನಿನ್ನೆ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ಕೊನೆಯುಸಿರು ಎಳೆದಿದ್ದಾರೆ. ಶನಿವಾರ ಹೃದಯ ಸ್ತಂಭನದಿAದ ಆಶಾ ಭೋಸ್ಲೆಯವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಿನ್ನೆ ಮಧ್ಯಾಹ್ನ 12 ಗಂಟೆಗೆ ಚಿಕಿತ್ಸೆ ಫಲಕಾರಿಯಾಗದೇ ಇಹಲೋಕ ತ್ಯಜಿಸಿದ್ದಾರೆ. ಆಶಾ ಭೋಸ್ಲೆ ಶಕ್ತಿಯುತ ಧ್ವನಿಗೆ ಜಗತ್ತೇ ಮರುಳಾಗಿತ್ತು.
ಇಂದು ಶಿವಾಜಿ ಪಾರ್ಕ್ನಲ್ಲಿ ಆಶಾ ಭೋಸ್ಲೆ ಅಂತ್ಯಕ್ರಿಯೆ



