ಬೆಂಗಳೂರು: ಬ್ರ್ಯಾಂಡ್ ಬೆಂಗಳೂರು ಕಟ್ಟುತ್ತೇವೆ ಎಂದು ಬಡಾಯಿ ಕೊಚ್ಚಿಕೊಂಡವರು ಈಗ ಬಿಬಿಎಂಪಿಯನ್ನ ಬ್ರಹ್ಮಾಂಡ ಬ್ರಷ್ಟಾಚಾರದ ಕೂಪವಾಗಿಸಿದ್ದಾರೆ ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ದೂರಿದ್ದಾರೆ.
ಈ ಸಂಬಂಧ ಟ್ವಿಟ್ ಮಾಡಿರುವ ಅವರು, ಬಿಬಿಎಂಪಿ ವ್ಯಾಪ್ತಿಯಲ್ಲಿ ತೆರಿಗೆ ಸಂಗ್ರಹದಲ್ಲಿ ನಡೆದಿರುವ ಅಕ್ರಮವನ್ನು ಬಯಲಿಗೆಳೆಯಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿವೃತ್ತ ನ್ಯಾಯಾಧೀಶರೊಬ್ಬರ ನೇತೃತ್ವದ ತನಿಖಾ ಸಮಿತಿ ರಚಿಸಬೇಕು ಎಂದು ಒತ್ತಾಯಿಸಿದ್ದಾರೆ. ಡಿಸಿಎಂ ಹಾಗೂ ಬೆಂಗಳೂರು ಅಭಿವೃದ್ಧಿ ಸಚಿವ ಡಿ.ಕೆ.ಶಿವಕುಮಾರ್ ಅವರು ತೆರಿಗೆ ಬಾಕಿ ಉಳಿಸಿಕೊಂಡಿರುವವರಿಗೆ ನೋಟಿಸ್ ಕಳಿಸಿ ದಂಡ ಸಮೇತ ತೆರಿಗೆ ವಸೂಲಿ ಮಾಡಬೇಕು ಎಂದಿದ್ದಾರೆ.