ಬೆಂಗಳೂರು: ವಿಧಾನಸಭೆ ಚುನಾವಣೆ ನಡೆದು ಆರು ತಿಂಗಳಾಗುತ್ತಾ ಬಂದರೂ ವಿಧಾನಸಭೆ ಹಾಗೂ ವಿಧಾನಪರಿಷತ್ನ ವಿಪಕ್ಷ ನಾಯಕನ ಆಯ್ಕೆ ನಡೆಯದೆ ಇದ್ದು ಅದಕ್ಕೆ ಬಹುತೇಕ ಮುಹೂರ್ತ ಕೂಡಿಬಂದಿದೆ.
ರಾಜ್ಯ ವಿಧಾನಸಭೆ ಹಾಗೂ ವಿಧಾನಪರಿಷತ್ ಆಯ್ಕೆ ಬಗ್ಗೆ ಸಮಾಲೋಚನೆ ನಡೆಸಲು ಇಂದು ಬಿಜೆಪಿ ಶಾಸಕರ ಸಭೆ ನಡೆಯಲಿದೆ.
ಸಂಜೆ 6 ಗಂಟೆಗೆ ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ಪಕ್ಷದ ರಾಜ್ಯಾಧ್ಯಕ್ಷರಾಗಿರುವ ಬಿ.ವೈ.ವಿಜಯೇಂದ್ರಅವರು ಶಾಸಕಾಂಗ ಪಕ್ಷ ಸಭೆ ಕರೆದಿದ್ದು, ಸಭೆಯಲ್ಲಿ ಕೇಂದ್ರದ ವೀಕ್ಷಕರಾಗಿ ಪಾಲ್ಗೊಳ್ಳಲುಕೇಂದ್ರ ಸಚಿವ ನಿರ್ಮಲಾ ಸೀತಾರಾಮನ್ ಹಾಗೂ ಪಕ್ಷದ ರಾಷ್ಟ್ರೀಯ ಪ್ರಧಾನಕಾರ್ಯದರ್ಶಿ ದುಶ್ಯಂತ್ ಕುಮಾರ್ ಅವರು ಈಗಾಗಲೇ ಬೆಂಗಳೂರಿಗೆ ಆಗಮಿಸಿದ್ದಾರೆ.
ವಿಪಕ್ಷನಾಯಕನಾಗಲು ಪಕ್ಷದಲ್ಲಿ ಹಲವರು ಆಕಾಂಕ್ಷಿಗಳಾಗಿದ್ದು, ಮೇಲ್ನೋಟಕ್ಕೆ ಮಾತ್ರ ಯಾವುದೇ ರೀತಿಯ ಪೈಪೋಟಿ ಕಂಡುಬರೆದೆ ಇದ್ದರೂ ಒಳಗಿಂದೊಳಗೆ ವಿಪಕ್ಷನಾಯಕನ ಸ್ಥಾನಕ್ಕೆ ತೀವ್ರ ಪೈಪೋಟಿಯಂತು ನಡೆದೆ ಇದೆ.ಮಾಜಿ ಉಪಮುಖ್ಯಮಂತ್ರಿಗಳಾದ ಆರ್. ಅಶೋಕ್, ಅಶ್ವತ್ಥ್ನಾರಾಯಣ ಹಾಗೂ ಮಾಜಿ ಸಚಿವ ಸುನೀಲ್ ಕುಮಾರ್ ವಿಪಕ್ಷ ನಾಯಕನಾಗಲು ವರಿಷ್ಠರ ಮನವೊಲಿಕೆಗೆ ಮುಂದಾಗಿದ್ದಾರೆ.
ಈಗಾಗಲೇ ಬಹುತೇಕ ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರೇ ವಿಪಕ್ಷನಾಯಕರಾಗುತ್ತಾರೆ ಎಂದು ಹೇಳಲಾಗಿತ್ತಾದರೂ ಇದೀಗ ಅವರು ಆರೋಗ್ಯದ ಕಾರಣ ವಿಪಕ್ಷ ನಾಯಕ ಸ್ಥಾನದ ರೇಸ್ನಿಂದ ಹಿಂದೆ ಸರಿದಿದ್ದಾರೆ ಎಂದು ಹೇಳಲಾಗುತ್ತದೆ.
ಈಗಾಗಲೇ ವಿಜಯೇಂದ್ರ ಅವರುಪಕ್ಷದ ರಾಜ್ಯಾಧ್ಯಕ್ಷರಾಗಿರುವ ಹಿನ್ನೆಲೆಯಲ್ಲಿಬಹುತೇಕ ಆರ್. ಅಶೋಕ್ ಅಥವಾ ವಿ.ಸುನೀಲ್ ಕುಮಾರ್ ವಿಪಕ್ಷನಾಯಕ ರಾಗುತ್ತಾರೆ ಎಂದು ಲೆಕ್ಕಾಚಾರದ ಮಾತುಗಳು ಕೇಳಿಬಂದಿವೆ.ಪಕ್ಷದ ರಾಷ್ಟ್ರೀಯ ವರಿಷ್ಠರು ಸಹ ಅಶೋಕ್ ಅಥವಾ ಸುನೀಲ್ ಕುಮಾರ್ ಅವರ ಹೆಸರನ್ನು ಪರಿಶೀಲನೆ ನಡೆಸಿದೆ ಎಂದು ಮೂಲಗಳು ತಿಳಿಸಿವೆ.
ಇತ್ತ ವಿಧಾನಪರಿಷತ್ಗೆ ಕಳೆದ ಬಾರಿಸರ್ಕಾರದಲ್ಲಿ ಆಡಳಿತ ಪಕ್ಷದಲ್ಲಿ ನಾಯಕರಾಗಿದ್ದ ಕೋಟಾ ಶ್ರೀನಿವಾಸ್ ಪೂಜಾರಿ ಅವರು ಮತ್ತೆ ವಿಪಕ್ಷನಾಯಕರಾಗುತ್ತಾರೆ ಎಂದು ಹೇಳಲಾಗುತ್ತಿದ್ದು, ಸುನೀಲ್ ಕುಮಾರ್ ಅವರು ವಿಧಾನಸಭೆ ವಿಪಕ್ಷನಾಯಕರಾದರೆ ಕೋಟಾ ಶ್ರೀನಿವಾಸ್ ಪೂಜಾರಿ ಅವರಿಗೆ ಪರಿಷತ್ನಲ್ಲಿ ವಿಪಕ್ಷ ನಾಯಕನ ಪಟ್ಟ ಕೈತಪ್ಪಿರವಿಕುಮಾರ್ ಅವರಿಗೆ ಆಸ್ಥಾನ ದೊರೆಯ-ಲಿದೆ ಎಂದು ಚರ್ಚೆ ನಡೆಯುತ್ತಿದೆ.
ಸಂಜೆ ನಡೆಯುವ ಶಾಸಕಾಂಗ ಸಭೆಯಲ್ಲಿ ಶಾಸಕರ ಅಭಿಪ್ರಾಯವನ್ನು ಪ್ರತ್ಯೇಕವಾಗಿ ಸಂಗ್ರಹಿಸಲಾಗುವುದು. ಅವಶ್ಯಕತೆ ಬಿದ್ದರೆ ರಹಸ್ಯ ಮತದಾನವೂ ನಡೆಯಲಿದೆ. ಶಾಸಕಾಂಗ ಸಭೆಯ ನಂತರ ಕೇಂದ್ರದ ವೀಕ್ಷಕರು ತಮ್ಮ ವರದಿಯನ್ನು ರಾಷ್ಟ್ರೀಯ ವರಿಷ್ಠರಿಗೆ ತಲುಪಿಸಿ ನಂತರ ಅವರ ಆದೇಶದಂತೆ ಉಭಯ ಸದನಗಳ ವಿಪಕ್ಷ ನಾಯಕರ ಹೆಸರು ಘೋಷಣೆ ಮಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.