ಹಾಸನ : ಹಾಸನದಲ್ಲಿ ಕ್ಷುಲ್ಲಕ ಕಾರಣಕ್ಕೆ ಯುವಕನ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ವರದಿಯಾಗಿದೆ. ಹಾಸನ ಹೊರವಲಯದ ಗೆಂಡೆಕಟ್ಟೆ ಅರಣ್ಯದಲ್ಲಿ ಈ ಘಟನೆ ನಡೆದಿದ್ದು, ಬಟ್ಟೆ ಬಿಚ್ಚಿ ಭರತ ಎನ್ನುವ ಯುವಕನ ಮೇಲೆ ಯುವಕರ ಗುಂಪು ಹಲ್ಲೆ ಮಾಡಿದೆ. ಈ ಘಟನೆಗೆ ಯುವತಿ ಹಾಗು ಹಣದ ವಿಚಾರ ಎಂಬ ಅನುಮಾನ ವ್ಯಕ್ತವಾಗಿದೆ. ಯುವಕ ಭರತ್ ಎಷ್ಟೇ ಬೇಡಿಕೊಂಡರೂ ಕೂಡ ಕಿಡಿಗೇಡಿಗಳು ಆತನ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ. ಘಟನೆ ಕುರಿತಂತೆ ಬಡಾವಣೆ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ


		
		
		
		