ಬೆಂಗಳೂರು: ಪತ್ನಿಯ ಅಕ್ರಮ ಸಂಬಂಧ ಶಂಕಿಸಿ ಪತಿಯೇ ಹಲ್ಲೆ ನಡೆಸಿದ ಘಟನೆ ಬೆಂಗಳೂರಿನ ಜೆ.ಪಿ ನಗರದಲ್ಲಿ ಕಳೆದ ಭಾನುವಾರ ನಡೆದಿದೆ.
ಹೆಚ್ಎಸ್ಆರ್ ಲೇಔಟ್ನ ಖಾಸಗಿ ಕಂಪನಿ ಉದ್ಯೋಗಿಯಾಗಿರುವ ಮಹಿಳೆ, ಕಚೇರಿ ಕೆಲಸದ ವಿಚಾರವಾಗಿ ತನ್ನ ಸಹೋದ್ಯೋಗಿಯನ್ನು ಮನೆಗೆ ಕರೆಸಿಕೊಂಡು ಮಾತನಾಡುತ್ತಿದ್ದರು.
ಈ ವೇಳೆ ಹೊಗಡೆಯಿಂದ ಮನೆಗೆ ಬಂದ ಪತಿಗೆ ಶಾಕ್ ಆಗಿದ್ದು, ಪರಪುರಷನ ಜೊತೆ ಪತ್ನಿ ಕಂಡು ಅನುಮಾನದ ಹಿನ್ನಲೆ ಚಾಕುವಿನಿಂದ ಇರಿದು ಹಲ್ಲೆಗೈದಿದ್ದಾನೆ.ಈ ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಇಬ್ಬರಿಗೂ ಅಕ್ರಮ ಸಂಬಂಧ ಶಂಕೆ ಹಿನ್ನಲೆ ಕತ್ತರಿ ಮತ್ತು ಚಾಕುವಿನಿಂದ ಹಲ್ಲೆಗೊಳಿಸಿದ್ದಾನೆ.
ಹಲ್ಲೆಗೊಳಗಾದ ಮಹಿಳೆಗೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಆರೋಪಿಯನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸಿದ್ದಾರೆ. ಈ ಕುರಿತು ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.