ರಾಮನಗರ: ಎರಡು ಜೀವಗಳನ್ನು ಬಲಿ ತೆಗೆದುಕೊಂಡಿದ್ದ ಪುಂಡಾನೆಯನ್ನು ತೆಂಗಿನಕಲ್ಲು ಅರಣ್ಯ ಪ್ರದೇಶ ವ್ಯಾಪ್ತಿಯಲ್ಲಿ ಸೆರೆ ಹಿಡಿಯುವಲ್ಲಿ ಅಭಿಮನ್ಯು ಮತ್ತು ತಂಡ ಯಶಸ್ವಿಯಾಗಿದೆ.
ಅರಣ್ಯದಂಚಿನಿಂದ ಗ್ರಾಮಗಳತ್ತ ಲಗ್ಗೆ ಹಿಡುತ್ತಿದ್ದ ಪುಂಡಾನೆಯ ಉಪಟಳದಿಂದ ಇಬ್ಬರು ಅಮಾಯಕರು ಬಲಿಯಾಗಿದ್ದರು, ಕೂಡಲೇ ಅರಣ್ಯ ಇಲಾಖೆ ಅಧಿಕಾರಿಗಳು ಎಚ್ಚತ್ತುಕೊಂಡು ಆಪರೇಷನ್ ಎಲಿಫ್ಯಾಂಟ್-5 ಮೊದಲ ಹಂತದ ಕಾರ್ಯಾಚರಣೆ ಆರಂಭಿಸಿದ್ದರು. ಕಳೆದ ಮೂರು ದಿನಗಳಿಂದ ಪುಂಡಾನೆ ಸೆರೆ ಕಾರ್ಯಾಚರಣೆ ನಡೆದು ಚನ್ನಪಟ್ಟಣ ತಾಲ್ಲೂಕಿನ ಅರಳಾಳುಸಂದ್ರ ಗ್ರಾಮದ ಬಳಿ ಗುರುವಾರ ಬೆಳಿಗ್ಗೆ ಅರವಳಿಕೆ ಮದ್ದು ನೀಡಿ ಪುಂಡಾನೆಯನ್ನು ಸೆರೆ ಹಿಡಿಯಲಾಗಿದೆ.
ಪುಂಡಾನೆ ಸೆರೆ ಹಿಡಿದಿರುವ ಸುದ್ದಿ ತಿಳಿಯುತ್ತಿದ್ದಂತೆ ಅರಣ್ಯದಂಚಿನ ಗ್ರಾಮಗಳ ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ. ಇನ್ನೂ 4- 5 ಪುಂಡಾನೆಗಳನ್ನು ಗುರುತಿಸಿರುವ ಅರಣ್ಯ ಇಲಾಖೆ ಅಧಿಕಾರಿಗಳು ಉಳಿದಿರುವ ಆನೆಗಳ ಸೆರೆಗೆ ಕಾರ್ಯಾಚರಣೆ ಮುಂದುವರಿಸಿದ್ದಾರೆ.
Leave a Review