ಭಾರತ ಹಾಗೂ ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಯ ಮೊದಲ ಪಂದ್ಯ ನವೆಂಬರ್ 23 ಗುರುವಾರದಂದು ವಿಶಾಖಪಟ್ಟಣಂನ ವೈಎಸ್ ರಾಜಶೇಖರ ರೆಡ್ಡಿ ಸ್ಟೇಡಿಯಂನಲ್ಲಿ ಆಯೋಜನೆಯಾಗಲಿದೆ. ಸಂಜೆ 7 ಗಂಟೆಗೆ ಪಂದ್ಯ ಆರಂಭವಾಗಲಿದ್ದು ಅದಕ್ಕೂ ಅರ್ಧ ಗಂಟೆ ಮುನ್ನ ಅಂದರೆ 6:30ಕ್ಕೆ ಟಾಸ್ ಪ್ರಕ್ರಿಯೆ ನಡೆಯಲಿದೆ. ಸ್ಪೋರ್ಟ್ಸ್ 18-1 ಹಾಗೂ ಸ್ಪೋರ್ಟ್ಸ 18-1 ಊಆಯಲ್ಲಿ ಈ ಪಂದ್ಯ ನೇರಪ್ರಸಾರವಾಗಲಿದೆ. ಇನ್ನು ಜಿಯೋ ಸಿನಿಮಾದಲ್ಲಿ ಈ ಪಂದ್ಯದ ಲೈವ್ಸ್ಟ್ರೀಮಿಂಗ್ ಆಗಲಿದೆ.
ಗಾಯದಿಂದಾಗಿ ಕಳೆದ ಎರಡು ತಿಂಗಳಿನಿಂದ ಮೈದಾನದಿಂದ ದೂರವಾಗಿದ್ದ ಅಕ್ಷರ್ ಪಟೇಲ್ ಮತ್ತೆ ಕಣಕ್ಕಿಳಿಯಲು ಸಜ್ಜಾಗಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ ಐದು ಪಂದ್ಯಗಳ ಟಿ20 ಸರಣಿಗೆ ಅಕ್ಷರ್ ಪಟೇಲ್ ಆಯ್ಕೆಯಾಗುವ ಭಾರತ ತಂಡಕ್ಕೆ ಕಮ್ಬ್ಯಾಕ್ ಮಾಡಲು ಸಜ್ಜಾಗುತ್ತಿದ್ದಾರೆ. ಮುಂದಿನ ಜೂನ್ನಲ್ಲಿ ಆರಂಭವಾಗಲಿರುವ ಟಿ20 ವಿಶ್ವಕಪ್ ಟೂರ್ನಿಯ ದೃಷ್ಟಿಯಿಂದ ಅಕ್ಷರ್ ಈ ಸರಣಿಯ ಮೂಲಕ ತಮ್ಮ ಅತ್ಯುತ್ತಮ ಪ್ರದರ್ಶನ ನೀಡುವತ್ತ ಚಿತ್ತ ನೆಡಲಿದ್ದಾರೆ.
ಟೀಮ್ ಇಂಡಿಯಾ ಸಂಭಾವ: ಋತುರಾಜ್ ಗಾಯಕ್ವಾಡ್, ಇಶಾನ್ ಕಿಶನ್, ಯಶಸ್ವಿ ಜೈಸ್ವಾಲ್/ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್, ರಿಂಕು ಸಿಂಗ್, ಶಿವಂ ದುಬೆ/ಜಿತೇಶ್ ಶರ್ಮಾ, ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ಅರ್ಷದೀಪ್ ಸಿಂಗ್, ಪ್ರಸಿದ್ಧ್ ಕೃಷ್ಣ, ಮುಖೇಶ್ ಕುಮಾರ್
ಆಸ್ಟ್ರೇಲಿಯಾ ಸಂಭಾವ್ಯ: ಮ್ಯಾಥ್ಯೂ ವೇಡ್, ಟ್ರಾವಿಸ್ ಹೆಡ್, ಸ್ಟೀವ್ ಸ್ಮಿತ್, ಗ್ಲೆನ್ ಮ್ಯಾಕ್ಸ್ವೆಲ್, ಮಾರ್ಕಸ್ ಸ್ಟೊಯಿನಿಸ್, ಟಿಮ್ ಡೇವಿಡ್, ಆರನ್ ಹಾರ್ಡಿ, ನಾಥನ್ ಎಲ್ಲಿಸ್, ಕೇನ್ ರಿಚರ್ಡ್ಸನ್ / ಶಾನ್ ಅಬಾಟ್, ಜೇಸನ್ ಬೆಹ್ರೆನ್ಡಾರ್ಫ್, ಆಡಮ್ ಝಂಪಾ