ಗುವಾಹಟಿ: ಗುವಾಹಟಿಯಲ್ಲಿ ನಡೆದ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಟಿ20 ಪಂದ್ಯದಲ್ಲಿ ಆಸ್ಟ್ರೇಲಿಯಾ 5 ವಿಕೆಟ್ ಗಳ ಜಯ ಗಳಿಸಿದೆ. ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡದ ನಾಯಕ ಮ್ಯಾಥ್ಯೂ ಹೆಡ್ ಬೌಲಿಂಗ್ ಆಯ್ಕೆ ಮಾಡಿಕೊಂಡರು.
ಭಾರತ ನಿಗದಿತ 20 ಓವರ್ ಗಳಲ್ಲಿ 3 ವಿಕೆಟ್ ನಷ್ಟಕ್ಕೆ 222 ರನ್ ಗಳಿಸಿ 223 ರನ್ ಗಳ ಗುರಿ ನೀಡಿತ್ತು. ಭಾರತ ತಂಡದ ಪರ ರುತುರಾಜ್ ಗಾಯಕ್ವಾಡ ಭರ್ಜರಿ ಶತಕ ಸಿಡಿಸುವ ಮೂಲಕ ತಂಡ ಬೃಹತ್ ಮೊತ್ತ ಕಲೆಹಾಕಲು ನೆರವಾದರು.
ಈ ಮೊತ್ತ ಬೆನ್ನತ್ತಿದ ಆಸ್ಟ್ರೇಲಿಯಾ ತಂಡ 20 ಓವರ್ಗೆ 5 ವಿಕೆಟ್ ನಷ್ಟಕ್ಕೆ 225 ರನ್ ಗಳಿಸುವ ಮೂಲಕ 5 ವಿಕೆಟ್ಗಳ ರೋಚಕ ಗೆಲುವು ದಾಖಲಿಸಿತು. ಈ ಮೂಲಕ 5 ಪಂದ್ಯಗಳ ಸರಣಿಯಲ್ಲಿ ಭಾರತ ತಂಡ 2-1ರ ಅಂತರದಿಂದ ಮುನ್ನಡೆ ಸಾಧಿಸಿದ್ದು, ಆಸ್ಟ್ರೇಲಿಯಾಗೆ ಸರಣಿ ಗೆಲ್ಲುವ ಆಸೆ ಜೀವಂತವಾಗಿ ಉಳಿದಿದೆ.