ಕನಕಪುರ: ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶದಲ್ಲಿ ಆರ್.ಇ.ಎಸ್. ಕಾಲೇಜು ಶೇ.95.94. ವಿದ್ಯಾರ್ಥಿಗಳ ತೇರ್ಗಡೆಯೊಂದಿಗೆ ದಾಖಲೆ ನಿರ್ಮಾಣ ವಾಗಿರುವುದಾಗಿ ಸಂಸ್ಥೆಯ ಅಧ್ಯಕ್ಷ ಹೆಚ್.ಕೆ. ಶ್ರೀಕಂಠ ತಿಳಿಸಿದರು. ಶುಕ್ರವಾರ ಕಾಲೇಜಿನ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಲೇಜಿನ ಕಲಾ ವಿಭಾಗದಲ್ಲಿ 31 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು,28 ವಿದ್ಯಾರ್ಥಿ ಗಳು ಉತ್ತೀರ್ಣರಾದರೆ, ವಾಣಿಜ್ಯ ವಿಭಾಗದಲ್ಲಿ 43 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು,43 ವಿದ್ಯಾರ್ಥಿ ಗಳು ಉತ್ತೀರ್ಣರಾಗಿದ್ದು, ಶೇ.100 ರಷ್ಟು ಫಲಿತಾಂಶ ಬಂದಿರುವುದಾಗಿ ತಿಳಿಸಿದರು.ಕಲಾ ವಿಭಾಗದಲ್ಲಿ ಒಬ್ಬ ವಿದ್ಯಾರ್ಥಿ ಇಡೀ ಜಿಲ್ಲೆಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿ ಕಾಲೇಜಿಗೆ ಕೀರ್ತಿ ತಂದಿರುವುದಾಗಿ ಹರ್ಷ ವ್ಯಕ್ತಪಡಿಸಿ ಕಾಲೇಜು ಉಪನ್ಯಾಸಕರಿಗೆ ಹಾಗೂ ಪೋಷಕರಿಗೆ ಅಭಿನಂದನೆ ಸಲ್ಲಿಸಿದರು. ವಾಣಿಜ್ಯ ವಿಭಾಗದಲ್ಲಿ 10 ಅತ್ಯುನ್ನತ ಶ್ರೇಣಿ, 26 ಪ್ರಥಮ ದರ್ಜೆ, 3 ದ್ವಿತೀಯ ದರ್ಜೆ, 01 ತೃತಿಯ ದರ್ಜೆ ಫಲಿತಾಂಶ ಬಂದಿರುವುದಾಗಿ ತಿಳಿಸಿದರು.ಕಾಲೇಜಿನ ಪ್ರಾಂಶುಪಾಲರು, ಉಪನ್ಯಾಸಕರು, ಸಂಸ್ಥೆಯ ನಿರ್ದೇಶಕರಾದ ಎಂ.ಎಲ್.ಶಿವಕುಮಾರ್, ಪುಟ್ಟಸ್ವಾಮಿ ಹಾಗೂ ಸಿಬ್ಬಂದಿಗಳು ಈ ವೇಳೆ ಹಾಜರಿದ್ದರು.



