ಹೊಸಕೋಟೆ: ಸಮೀಪದ ದಂಡುಪಾಳ್ಯ ದಲ್ಲಿರುವ ಎಂವಿಜೆ ನರ್ಸಿಂಗ್ ಕಾಲೇಜಿನವಿದ್ಯಾರ್ಥಿಗಳು ವಿಶ್ವ ಏಡ್ಸ್ ದಿನಾಚರಣೆ ಅಂಗವಾಗಿ ಜಾಗೃತಿ ಜಾಥಾ ನಡೆಸಿದರು.ನಗರದ ಸಾರ್ವಜನಿಕ ಸರಕಾರಿ ಆಸ್ಪತ್ರೆಯಿಂದ ಪ್ರಾರಂಭಗೊಂಡ ಜಾಥಾಗೆ ಎಂವಿಜೆ ವೈದ್ಯಕೀಯ ಕಾಲೇಜು ಮತ್ತುಸಂಶೋಧನಾ ಆಸ್ಪತ್ರೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ, ನರ್ಸಿಂಗ್ ಕಾಲೇಜಿನ ನಿರ್ದೇಶಕಿ
ಡಾ: ಧರಣಿ ಮೋಹನ್ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಏಡ್ಸ್ ಸೋಂಕಿಗೆ ಒಳಗಾಗದಂತೆ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಸಮುದಾಯದಲ್ಲಿ ಅರಿವು ಮೂಡಿಸುವುದು ಜಾಥಾದ ಪ್ರಮುಖ ಉದ್ದೇಶವಾಗಿದೆ. ಕಾಲೇಜಿನ ವಿದ್ಯಾರ್ಥಿಗಳು ತಮ್ಮ ಪಠ್ಯಾಭ್ಯಾಸದೊಂದಿಗೆ ಇಂತಹ ಸಾಮಾಜಿಕ ಉಪಯುಕ್ತವಾದ ಚಟುವಟಿಕೆಗಳಲ್ಲಿ ತೊಡಗಲು ಪ್ರೋತ್ಸಾಹಿಸುವ ಮೂಲಕ ಅವರಿಗೂ ಸಹ ಸಮಾಜದ ಬಗ್ಗೆ ಹೆಚ್ಚಿನ ಕಾಳಜಿ ಹೊಂದಲು ಪ್ರೋತ್ಸಾಹಿಸಲಾಗುತ್ತಿದೆ.
ಇಷ್ಟೇ ಅಲ್ಲದೆ ಬಹಳಷ್ಟು ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳ ಬಗ್ಗೆಯೂ ಸಹ ವಿದ್ಯಾರ್ಥಿಗಳು ಸಮುದಾಯದಲ್ಲಿ ಅರಿವು ಮೂಡಿಸುವ ಕಾರ್ಯ ಕೈಗೊಳ್ಳುತ್ತಿದ್ದಾರೆ. ಈ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ಆಸಕ್ತಿಯಿಂದ ಪಾಲ್ಗೊಳ್ಳುತ್ತಿರುವುದು ಪ್ರಶಂಸನೀಯ. ಇದರೊಂ
ದಿಗೆ ಕಾಲೇಜಿನ ವಿದ್ಯಾರ್ಥಿಗಳು ರಾಷ್ಟ್ರೀಯ ಸೇವಾ ಯೋಜನೆಯಡಿ ಗ್ರಾಮೀಣ ಪ್ರದೇಶದ ಜನರಿಗೆ ಸ್ವಚ್ಛತೆ, ನೈರ್ಮಲ್ಯ, ಆರೋಗ್ಯ ಕಾಪಾಡಿಕೊಳ್ಳುವ ಬಗ್ಗೆ ಜಾಗೃತಿ ಮೂಡಿಸಿ ಯಾವುದೇ ತರಹವಾದ ಆರೋಗ್ಯದ ಸಮಸ್ಯೆಗಳು ಕಂಡುಬಂದಲ್ಲಿ ನಿರ್ಲಕ್ಷ್ಯ ವಹಿಸದೆ ವೈದ್ಯರಲ್ಲಿ ತಪಾಸಣೆಗೆ ಒಳಗಾಗಿಚಿಕಿತ್ಸೆ ಪಡೆಯಲು ಸೂಚಿಸುತ್ತಿದ್ದಾರೆ ಎಂದರು.
ಏಡ್ಸ್ ಸೋಂಕಿಗೆ ಒಳಗಾದವರು ಪ್ರಾರಂಭಿಕ ಹಂತದಲ್ಲಿಯೇ ಸೂಕ್ತಚಿಕಿತ್ಸೆ ಪಡೆದುಕೊಂಡಲ್ಲಿ ಗುಣಮುಖರಾಗಿ ಸಾಮಾನ್ಯ ಜೀವನ ನಡೆಸಲು ಸಾಧ್ಯ.ಸಮಾಜವು ಸಹ ಇಂತಹವರ ಬಗ್ಗೆ ತಿರಸ್ಕಾರ ಮನೋಭಾವ ಹೊಂದದೆ ಸಮಾನ ಅವಕಾಶಗಳನ್ನು ಒದಗಿಸ
ಬೇಕು. ಇದರಿಂದ ಇವರಲ್ಲಿ ಮಾನಸಿಕವಾಗಿಆತ್ಮಸ್ಥೈರ್ಯ ಹೆಚ್ಚಾಗಿ ಸೋಂಕಿನಿಂದ ನಿವಾರಣೆಯಾಗಲು ಸಹಕಾರಿಯಾಗಲಿದೆ ಎಂದು ಹೇಳಿದರು.
ವಿದ್ಯಾರ್ಥಿಗಳು ಏಡ್ಸ್ ಬಗ್ಗೆ ಮಾಹಿತಿಯನ್ನೊಳಗೊಂಡ ಕರಪತ್ರಗಳನ್ನು ಸಾರ್ವಜನಿಕರಿಗೆ ವಿತರಿಸಿದರು. ಎಂವಿಜೆ ನರ್ಸಿಂಗ್ ಕಾಲೇಜಿನ ಪ್ರಿನ್ಸಿಪಾಲ್ ಪ್ರೊ: ಜಿ. ಪ್ರಿಸಿಲ್ಲಾ ನಿರ್ಮಲ್, ವೈಸ್ ಪ್ರಿನ್ಸಿಪಾಲ್ ಬಿ. ಮಹಾಲಕ್ಷ್ಮಿ, ಶರ್ಮಿಳಾ, ಪವಿತ್ರ, ಅರುಣ್, ಗೌತಮಿ, ವಿ. ಅನಸೂಯ ಮತ್ತು ಅರವಿಂದ್ ಭಾಗವಹಿಸಿದ್ದರು.