ಮಹದೇವಪುರ: ಸಂವಿಧಾನ ಮೂಲ ಆಶಯಗಳನ್ನು ಬುಡಮೇಲು ಮಾಡಲು ಹೊರಟಿರುವ ಕೆಲವು ಮೂಲಭೂತವಾದಿಗಳಿಂದ ಸಂವಿಧಾನವನ್ನು ರಕ್ಷಣೆ ಮಾಡಲುಇದೇ 29 ರಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ( ಅಂಬೇಡ್ಕರ್ ವಾದ) ವತಿಯಿಂದ
ಜಿಲ್ಲಾ ಮಟ್ಟದ ಜಾಗೃತಿ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ ಎಂದು ಬೆಂಗಳೂರು ವಿಭಾಗೀಯ ಉಪ ಪ್ರಧಾನ ಸಂಚಾಲಕ ಮಣಿಪಾಲ್ ರಾಜಪ್ಪ ತಿಳಿಸಿದರು.
ವರ್ತೂರಿನಲ್ಲಿ ಡಿ.ಎಸ್. ಎಸ್ ನ ಪೂರ್ವ ತಾಲ್ಲೂಕು ಘಟಕ ವತಿಯಿಂದ ಆಯೋಜಿಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
ಸಂವಿಧಾನ ಸಮರ್ಪಣಾ ದಿನದ ಅಂಗವಾಗಿ ಸಂವಿಧಾನ ರಕ್ಷಣೆ ಮತ್ತು ಪ್ರಜಾಪ್ರಭುತ್ವ ಉಳಿವಿಗಾಗಿ ನಗರದ ವಸಂತನಗರದ ಅಂಬೇಡ್ಕರ್ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ.
ಸಮಾವೇಶದಲ್ಲಿ ನಾಡಿನ ಖ್ಯಾತ ಸಾಹಿತಿಗಳು,ಚಿಂತಕರು, ಲೇಖಕರು ಪಾಲ್ಗೊಳ್ಳಲ್ಲಿದ್ದಾರೆ, ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಭಾಗವಹಿಸುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದರು.ಸುದ್ದಿ ಗೋಷ್ಠಿಯಲ್ಲಿ ನಗರ ಜಿಲ್ಲಾ ಖಜಾಂಚಿ ದಶರಥ್ ಕೋಟಿ, ತಾಲ್ಲೂಕು ಪ್ರಧಾನ ಸಂಚಾಲಕ ಗೋವಿಂದ್ ಕುಮಾರ್, ನಾರಾಯಣಸ್ವಾಮಿ, ಸಮಿತಿಯ ಪದಾಧಿಕಾರಿಗಳಾದ ಕೆ.ಮಂಜು, ಅರಹಳ್ಳಿ ಸೋಮಶೇಖರ್, ಆದೂರು ಮಂಜು, ರಾಜೇಂದ್ರ ಸೋಲ ವರ್ಮ, ಪಾಪಣ್ಣ ಹಾಜರಿದ್ದರು.