ಅಯೋಧ್ಯೆ : ಅಯೋಧ್ಯೆಯ ಶ್ರೀರಾಮ ಮಂದಿರಕ್ಕೆ ಭಕ್ತರು ನೀಡಿದ ದೇಣಿಗೆಯನ್ನು ದುರುಪಯೋಗ ಪಡಿಸಿಕೊಂಡ ಆರೋಪಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಪೊಲೀಸರು ಭರ್ಜರಿ ಕಾರ್ಯಾ ಚರಣೆ ನಡೆಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲ ಎಫ್ಐಆರ್ ದಾಖಲಾದ ಕೆಲವೇ ಗಂಟೆಗಳಲ್ಲಿ ಎಲ್ಲಾ ಎಂಟು ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ.ವಿಶೇಷ ತನಿಖಾ ತಂಡ ನೀಡಿದ ಪ್ರಾಥಮಿಕ ವರದಿಯ ಶಿಫಾರಸಿನ ಮೇರೆಗೆ, ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ನ ಸದಸ್ಯ ಕೃಷ್ಣ ಮೋಹನ್ ಅವರು ನೀಡಿದ ದೂರಿನ ಆಧಾರದ ಮೇಲೆ ಈ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು.



