ಬೆಂಗಳೂರು: ನಗರದ ಅಜೀಂ ಪ್ರೇಮ್ಜಿ ವಿಶ್ವವಿದ್ಯಾನಿಲಯದ ಪದವಿ ವಿದ್ಯಾರ್ಥಿಯೊಬ್ಬರು 16ನೇ ಮಹಡಿಯಿಂದ ಕೆಳಗೆ ಬಿದ್ದು ಶಂಕಾಸ್ಪದವಾಗಿ ಸಾವನ್ನಪ್ಪಿದ್ದಾರೆ.
ಹೈದರಾಬಾದ್ ಮೂಲದ ಭಾರತೀಯ ನೌಕಾಪಡೆಯ ನಿವೃತ್ತ ಅಧಿಕಾರಿ ಮನೋಹರ್ ನಂಬಿಯಾರ್ ಅವರ ಪುತ್ರ ಅಂತಿಮ ವರ್ಷದ ಬಿಎಸ್ ಸಿ ವಿದ್ಯಾರ್ಥಿ ಎಂ ಅಶ್ವಿನ್ ನಂಬಿಯಾರ್ (21) ಎಂದು ಮೃತಪಟ್ಟವರನ್ನು ಗುರುತಿಸಲಾಗಿದೆ.
ಸರ್ಜಾಪುರದಲ್ಲಿರುವ ವಿಶ್ವವಿದ್ಯಾ ನಿಲಯದ ಹಾಸ್ಟೆಲ್ನಲ್ಲಿ ನಿನ್ನೆ ಬೆ.7.30 ರಿಂದ8ರ ವೇಳೆ ಈ ದುರ್ಘಟನೆ ನಡೆದಿದ್ದು, ವಿದ್ಯಾರ್ಥಿ
ಸಾವನ್ನು ಆತ್ಮಹತ್ಯೆ ಎಂದು ಶಂಕಿಸಲಾಗಿದ್ದು, ಕಾರಣ ಇನ್ನೂ ತಿಳಿದುಬಂದಿಲ್ಲ, ಡೆತ್ ನೋಟ್ ಕೂಡ ಪತ್ತೆಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಆತ್ಮಹತ್ಯೆಯಿಂದ ವಿದ್ಯಾರ್ಥಿ ಸಾವನ್ನಪ್ಪಿದ್ದಾರೆಯೇ ಅಥವಾ ಸಾವಿನ ಹಿಂದೆ ಬೇರೆಯದ್ದೇ ಕಾರಣವಿದೆಯೇ ಎಂಬುದನ್ನು ಪರಿಶೀಲಿಸಬೇಕಾಗಿದೆ. ಮೃತದೇಹವನ್ನು ಅತ್ತಿಬೆಲೆಯ ಆಕ್ಸ್ಫರ್ಡ್ ವೈದ್ಯಕೀಯ ಕಾಲೇಜಿನ ಶವಾಗಾರಕ್ಕೆ ಸ್ಥಳಾಂತರಿಸಲಾಗಿದೆ ಎಂದು ಮಾಹಿತಿ ಲಭ್ಯವಾಗಿದೆ.