ಧರ್ಮಸ್ಥಳ/ಬೆಳ್ತಂಗಡಿ: ನನ್ನ ಮತ್ತು ಡಿ.ಕೆ. ಶಿವಕುಮಾರ್ ಮಧ್ಯೆ ಯಾವುದೇ ರೀತಿಯ ವ್ಯವಹಾರವೂ ಇಲ್ಲ, ಆತ್ಮೀಯತೆಯೂ ಇಲ್ಲ. ಅವರು ಕೆಪಿಸಿಸಿ ಅಧ್ಯಕ್ಷರಾಗಿದ್ದಾಗ ಒಬ್ಬ ರಾಜಕಾರಣಿಯಾಗಿ ನೀಡಬೇಕಾದ ಮರ್ಯಾದೆಯನ್ನು ಮಾತ್ರ ನಾನು ನೀಡಿದ್ದೇನೆ ಅಷ್ಟೇ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿದ್ದಾರೆ.ಕಳೆದ ಮೂರ್ನಾಲ್ಕು ದಿನಗಳಿಂದ ದೆಹಲಿಯಲ್ಲೇ ಮೊಕ್ಕಾಂ ಹೂಡಿ ರಾಷ್ಟ್ರೀಯ ನಾಯಕರನ್ನು ಭೇಟಿ ಮಾಡಿದ್ದ ಅವರು, ನಿನ್ನೆ ರಾತ್ರಿ ದೆಹಲಿಯಿಂದ ನೇರವಾಗಿ ಮಂಗಳೂರಿಗೆ ಆಗಮಿಸಿ, ಇಂದು ಮುಂಜಾನೆ ಶ್ರೀ ಕ್ಷೇತ್ರ ಧರ್ಮಸ್ಥಳದ ಮಂಜುನಾಥ ಸ್ವಾಮಿಯ ದರ್ಶನ ಪಡೆದರು. ಆ ಬಳಿಕ ನಡೆದ ಸುದ್ದಿಗೋಷ್ಠಿಯಲ್ಲಿ ವಿರೋಧಿಗಳಿಗೆ ತೀಕ್ಷಣ ಪ್ರತಿಕ್ರಿಯೆ ನೀಡಿದ್ದಾರೆ.ಪರಿಷತ್ ಚುನಾವಣೆಯಲ್ಲಿ ನಡೆದ ಅಡ್ಡಮತದಾನದ ಬೆನ್ನಲ್ಲೇ ಕೇಳಿಬರುತ್ತಿರುವ ಆರೋಪಗಳಿಗೆ ಉತ್ತರಿಸಿದ ಅವರು, ಅಡ್ಡ ಮತದಾನ ನಡೆದಾಗ ಅದಕ್ಕೆ ನಾನೇ ಕಾರಣ ಎಂಬ ಚರ್ಚೆಗಳನ್ನು ಸೃಷ್ಟಿಸಲಾಗುತ್ತಿದೆ. ರಾಜ್ಯದ ಬಿಜೆಪಿ ಅಧ್ಯಕ್ಷರು ಮತ್ತು ರಾಜ್ಯದ ಮುಖ್ಯಮಂತ್ರಿಗಳು ಜೊತೆಯಾಗಿದ್ದಾರೆ ಎಂಬ ಅಪಪ್ರಚಾರ ಮಾಡಲಾಗುತ್ತಿದೆ. ಆದರೆ ಡಿ.ಕೆ. ಶಿವಕುಮಾರ್ ಮತ್ತು ನನ್ನ ಮಧ್ಯೆ ಯಾವುದೇ ವ್ಯವಹಾರವಿಲ್ಲ. ನನ್ನ ವಿರುದ್ಧ ಯಾರು ಅಪಪ್ರಚಾರ ಮಾಡುತ್ತಿದ್ದಾರೋ, ಅವರಿಗೆ ಆ ಭಗವಂತನೇ ಒಳ್ಳೆಯ ಬುದ್ಧಿ ಕೊಡಲಿ ಎಂದು ಮಂಜುನಾಥ ಸ್ವಾಮಿಯಲ್ಲಿ ಪ್ರಾರ್ಥಿಸಿದ್ದೇನೆ ಧರ್ಮಾಧಿಕಾರಿಗಳಿಂದ ಆಶೀರ್ವಾದ..ಮಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿರುವ ಶಾಸಕ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಇಂದು ಧರ್ಮಾಧಿಕಾರಿ ಪರಮಪೂಜ್ಯ ಡಾಕ್ಟರ್ ಡಿ.ವೀರೇಂದ್ರ ಹೆಗ್ಗಡೆಯವರ ಆಶೀರ್ವಾದ ಪಡೆದರು. ಪಕ್ಷದ ಪ್ರಮುಖರು ಇದ್ದರು. ಇದೇವೇಳೆ ಬಿ.ವೈ.ವಿಜಯೇಂದ್ರ ಮತ್ತು ಪ್ರಮುಖರು ಶ್ರೀದೇವರ ದರ್ಶನ ಪಡೆದರು.



