ದೇವನಹಳ್ಳಿ : ದೇಶದಲ್ಲಿ ಈ ಹಿಂದೆ ತಲೆದೋರಿದ ಆಹಾರ ಸಮಸ್ಯೆ ಹೋಗಲಾಡಿಸಿ,ಕೃಷಿ ಕ್ಷೇತ್ರದಲ್ಲಿ ಹಸಿರು ಕ್ರಾಂತಿಗೆ ಕಾರಣರಾದರು. ಅಂತಹ ಮಹಾನ್ ನಾಯ ಕರ ಆದರ್ಶ ಗಳನ್ನು ಪಾಲಿಸಬೇಕಿದೆ ಎಂದು ತಹಶಿಲ್ದಾರ್ ಶಿವರಾಜು ತಿಳಿಸಿದರು.ದೇವನಹಳ್ಳಿ ಪಟ್ಟಣದ ತಾಲೂಕು ಪಂಚಾಯಿತಿ ಆವರಣದಲ್ಲಿ ತಾಲ್ಲೂಕು ಆಡಳಿತ ದಿಂದ ಹಮ್ಮಿ ಕೊಂಡಿದ್ದ ಡಾ.ಬಾಬು ಜಗಜೀವನ ರಾಂ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಜಯಂತಿಯಲ್ಲಿ ಭಾಗ
ವಹಿಸಿ ಮಾತನಾಡಿ, ಸಾಮಾಜಿಕ ಬದಲಾವಣೆಯ ಹರಿಕಾರ ಜಗಜೀವನ ರಾಮ್ ಆಗಿದ್ದರು.
ತಳ ಸಮುದಾಯಗಳ ಸಾಮಾಜಿಕ ನ್ಯಾಯಕ್ಕಾಗಿ ಹೋರಾಟ ಗಾರರಾಗಿ, 1935 ರ ವರ್ಷದಲ್ಲಿ ಇಂಡಿಯನ್ ಡಿಪ್ರೆಸ್ಡ್ ಕ್ಲಾಸಸ್ ಲೀಗ್ನ ರಚನೆಯ ಪ್ರಮುಖ ಭಾಗವಾಗಿ ದ್ದರು. ಸಮಾಜದಲ್ಲಿ ತುಳಿತಕ್ಕೊಳಗಾದ ಜನರಿಗೆ ಸಮಾನತೆ ಮತ್ತು ಕಲ್ಯಾಣವನ್ನು ಒದಗಿಸುವಲ್ಲಿ ಸಂಸ್ಥೆಯು ಗಮನ ಹರಿಸಿತ್ತು. ಪ್ರತಿ ವರ್ಷ, ಏಪ್ರಿಲ್ 5 ರಂದು ಬಾಬು ಜಗಜೀವನ್ ರಾಮ್ ಜಯಂತಿಯನ್ನು ಆಚರಿಸಲಾಗುತ್ತದೆ ಎಂದರು.
ದಲಿತ ಮುಖಂಡ ಕಾರಹಳ್ಳಿ ಶ್ರೀನಿವಾಸ್ ಮಾತನಾಡಿ, ದೇಶಾದ್ಯಂತ ‘ಬಾಬುಜಿ’ ಎಂದೇ ಕರೆಯಲ್ಪಡುವ ಜಗಜೀವನ ರಾಮ್ ಧೀಮಂತ ರಾಷ್ಟ್ರೀಯ ನಾಯಕ, ಸ್ವಾತಂತ್ರ್ಯ ಮತ್ತು ಸಾಮಾಜಿಕ ನ್ಯಾಯ ಹೋರಾಟಗಾರ ಹಾಗೂ ಅತ್ಯುತ್ತ್ತಮ ಸಂಸದೀಯ ಪಟುವಾಗಿದ್ದರು. ಬಾಬು ಜಗಜೀವನ ರಾಮ್ ಅವರು ಸ್ವಾತಂತ್ರ್ಯ ಹೋರಾಟಗಾರರಾಗಿ, ಸಂವಿಧಾನ ರಚನಾ ಸಭೆಯ ಸದಸ್ಯರಾಗಿ ಮತ್ತು ಮೊದಲ ಉಪ ಪ್ರಧಾನಿಯಾಗಿ ನಮ್ಮ ದೇಶಕ್ಕೆ ಮಹತ್ತರ ಕೊಡುಗೆ ನೀಡಿದ್ದಾರೆ.
ಭಾರತದಲ್ಲಿ ದೀರ್ಘ ಕಾಲದಿಂದ ಬೆಳೆದುಕೊಂಡು ಬಂದಿದ್ದ ಮೇಲು-ಕೀಳು ತಾರತಮ್ಯ, ಜಾತಿ ಪದ್ಧತಿ, ಅಸ್ಪೃಶ್ಯ ಎಂಬ ಮನೋಭಾವ ಗಳನ್ನು ತೊಡೆದು ಹಾಕಲು ಸಾಮಾಜಿಕ ನೆಲೆಗಟ್ಟಿನಲ್ಲಿ ಹೋರಾಡಿದವರು ಅನೇಕರು. ಆದರೆ ಅವರ ಏಳಿಗೆಗೆ ಹೆಚ್ಚಿನ ಚುರುಕು ನೀಡಿ ಒಂದು ಸ್ಪಷ್ಟ ರೂಪ ಕೊಟ್ಟ ಕೆಲವೇ ಕೆಲವು ನಾಯಕರಲ್ಲಿ ಬಾಬು ಜಗಜೀವನ ರಾಮ್ ಒಬ್ಬರು ಎಂದರೆ ತಪ್ಪಾಗಲಾರದು ದಲಿತ ಮನಸ್ಸುಗಳು ಒಗ್ಗೂಡಿ ದಲಿತ ವಿರೋಧಿ ನೀತಿಯನ್ನು ಪ್ರತಿಯೊಬ್ಬರು ಖಂಡಿಸಬೇಕಿದೆ ಎಂದರು.
ಕರ್ನಾಟಕ ರಾಜ್ಯ ಮಾದಿಗ ದಂಡೋರ ಮೀಸಲಾತಿ ಹೋರಾಟ ಸಮಿತಿ ಅದ್ಯಕ್ಷ ಮಾರಪ್ಪ ಮಾತನಾಡಿ, ಭಾರತದ ಸ್ವಾತಂತ್ರ್ಯ ಪೂರ್ವ ಮತ್ತು ಸ್ವಾತಂತ್ರ್ಯ ನಂತರದ ರಾಜಕಾರಣದಲ್ಲಿ ಬಾಬು ಜಗಜೀವನರಾಮ್ ಪಾತ್ರ ಪ್ರಮುಖವಾದದ್ದು. ರಾಜ್ಯದ್ಯಂತ ಮಾದಿಗ ಸಮುದಾಯ ಸಂಘಟನೆಯಲ್ಲಿ ತೊಡಗಿಸಿಕೊಳ್ಳುವ ಮೂಲಕ ಸಮುದಾಯಕ್ಕಾಗುವ ತೊಡಕುಗಳನ್ನು ಹಾಗೂ ಸರ್ಕಾರದಸೌಲಭ್ಯಗಳನ್ನು ಜನಾಂಗಕ್ಕೆ ಕೊಡಿಸುವ ಮೂಲಕ ಜನಾಂಗದ ಅಭಿವೃದ್ಧಿಗೆ ಶ್ರಮಿಸಲಾಗಿದೆ.
ದೇವನಹಳ್ಳಿ ತಾಲೂಕ ಆಡಳಿತ ಕಚೇರಿಯಲ್ಲಿ ಬಾಬು ಜಗಜೀವನ್ ರಾಮ್ ಅವರ ಪ್ರತಿಮೆ ನಿರ್ಮಾಣ ವಿಚಾರವಾಗಿ ಅಧಿಕಾರಿಗಳು ಗಮನ ಹರಿಸಬೇಕು ಕೇವಲ ಒಂದು ಸಮುದಾಯಕ್ಕೆ ಮಾತ್ರ ಸೀಮಿತವಲ್ಲ ಈ ಕಾರ್ಯಕ್ರಮ, ಕಾರ್ಮಿಕ ಇಲಾಖೆ ಸಿಬ್ಬಂದಿ ವರ್ಗ, ತಾಲೂಕು ಮಟ್ಟದ ವಿವಿಧ ಇಲಾಖೆಯ ಎಲ್ಲಾ ಅಧಿಕಾರಿಗಳು ಬಾಬೂಜಿಯವರ ಜಯಂತಿಗೆ ಮುಂದಿನ ದಿನಗಳಲ್ಲಿ ಭಾಗವಹಿಸುವಂತೆ ವೇದಿಕೆಯಲ್ಲಿ ಪುನರುಚ್ಚರಿಸಿದರು.
ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಅದಿಕಾರಿ ನಳಿನಾಕ್ಷಿ, ಮಾದಿಗ ತಂಡವರ ಮೀಸಲಾತಿ ಹೊರಾಟ ಸಮಿತಿಯ ಅಧ್ಯಕ್ಷ ಅಣ್ಣೇಶ್ವರ ವೆಂಕಟೇಶ್ ಪುರಸಭೆ ಮಾಜಿ ಅಧ್ಯಕ್ಷ ಮೂರ್ತಿ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಚಂದೇನಹಳ್ಳಿ ಮುನಿಯಪ್ಪ, ಪುರಸಭೆ ಮಾಜಿ ಸದಸ್ಯ ಕುಮಾರ್ ತಾಪಂ ಸದಸ್ಯ ಗೋಪಾಲ ಸ್ವಾಮಿ, ನಿವೃತ್ತ ಬ್ಯಾಂಕ್ ಅಧಿಕಾರಿ ಮುನಿಯಪ್ಪ ಜನಾಂಗದ ಪದಾಧಿಕಾರಿಗಳಾದ ವೇಣುಗೋಪಾಲ್, ಶ್ರೀನಿವಾಸ್ ಸೋಲೂರು ನಾಗರಾಜ್ ವೆಂಕಟಗಿರಿ ಕೋಟೆ ಮುನಿರಾಜು, ವೆಂಕಟೇಶ್, ಆನಂದ್,ಸೋಮಶೇಖರ್, ಅಣ್ಣೇಶ್ವರ ಮುನಿರಾಜು, ಮುಂತಾದವರು ಹಾಜರಿದ್ದರು.