ದೆಹಲಿ: ಭಾರತದ ಸ್ಟಾರ್ ಬ್ಯಾಡ್ಮಿಂಟನ್ ತಾರೆ ಬಿ ಸಾಯಿ ಪ್ರಣೀತ್ ನಿವೃತ್ತಿ ಘೋಷಿಸಿದ್ದಾರೆ. ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್ಶಿಪ್ನಲ್ಲಿ ಭಾರತಕ್ಕೆ ಕಂಚಿನ ಪದಕ ಗೆದ್ದುಕೊಟ್ಟಿದ್ದ ಸಾಯಿ ಇದೀಗ ದಿಢೀರ್ ನಿವೃತ್ತಿ ಘೋಷಿಸಿ ಅಚ್ಚರಿ ಮೂಡಿಸಿದ್ದಾರೆ.
ಏಕೆಂದರೆ ಈ ವರ್ಷ ಪ್ಯಾರಿಸ್ ಒಲಿಂಪಿಕ್ಸ್ ನಡೆಯಲಿದ್ದು, ಇದಕ್ಕೂ ಮುನ್ನ 31 ವರ್ಷದ ಅನುಭವಿ ಆಟಗಾರ ಬ್ಯಾಡ್ಮಿಂಟನ್ ಕೋರ್ಟ್ಗೆ ವಿದಾಯ ಹೇಳಿರುವುದು ಭಾರತದ ಪಾಲಿಗೆ ಹಿನ್ನಡೆಯಾಗಿದೆ.ಪ್ರಣೀತ್ 2019ರಲ್ಲಿ ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್ಶಿಪ್ನಲ್ಲಿ ಕಂಚಿನ ಪದಕ ಗೆದ್ದಿದ್ದರು. ಈ ಟೂರ್ನಿಯಲ್ಲಿ ಪದಕ ಗೆದ್ದ ದೇಶದ ಕೆಲವೇ ಆಟಗಾರರಲ್ಲಿ ಇವರು ಒಬ್ಬರು.
ಆದರೆ, ಪ್ರಣೀತ್ ಚಿಕ್ಕ ವಯಸ್ಸಿನಲ್ಲೇ ವೃತ್ತಿ ಜೀವನಕ್ಕೆ ವಿದಾಯ ಹೇಳಲು ನಿರ್ಧರಿಸಿದ್ದಾರೆ. ಇದಕ್ಕೆ ಮುಖ್ಯ ಕಾರಣ ಗಾಯದ ಸಮಸ್ಯೆ ಎಂದು ತಿಳಿಸಿದ್ದಾರೆ.ಟೋಕಿಯೊಒಲಿಂಪಿಕ್ಸ್-2020 ರಲ್ಲಿ ಕಾಣಿಸಿಕೊಂಡಿದ್ದ ಪ್ರಣೀತ್ ಆ ಬಳಿಕ ಗಾಯದ ಸಮಸ್ಯೆಗೆ ಒಳಗಾಗಿದ್ದರು. ಇದೀಗ ಈ ಸಮಸ್ಯೆಯು ಬಿಗಡಾಯಿಸಿರುವ ಕಾರಣ ವೃತ್ತಿಜೀವನಕ್ಕೆ ವಿದಾಯ ಹೇಳುತ್ತಿರುವುದಾಗಿ ತಿಳಿಸಿದ್ದಾರೆ.