ಬೆಂಗಳೂರು: ಕಳೆದ ವಿಧಾನಸಭೆ ಚುನಾವಣೆಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ (ಭಾಗ್ಯನಗರ) ಕ್ಷೇತ್ರದಿಂದ ಕಾಂಗ್ರೆಸ್ನ ಎಸ್.ಎನ್.ಸುಬ್ಬಾರೆಡ್ಡಿ ಆಯ್ಕೆಯನ್ನು ಅಸಿಂಧುಗೊಳಿಸಿ ಹೈಕೋರ್ಟ್ ಸೋಮವಾರ ಮಹತ್ವದ ಆದೇಶ ನೀಡಿದೆ.
ಸುಬ್ಬಾರೆಡ್ಡಿ ಆಯ್ಕೆಯನ್ನು ಅಸಿಂಧುಗೊಳಿಸಬೇಕು ಮತ್ತು ತಮ್ಮನ್ನು ವಿಜೇತ ಅಭ್ಯರ್ಥಿಯೆಂದು ಘೋಷಿಸುವಂತೆ ಕೋರಿ ಬಿಜೆಪಿಯ ಪರಾಜಿತ ಅಭ್ಯರ್ಥಿ ಸಿ.ಮುನಿರಾಜು ಸಲ್ಲಿಸಿದ್ದ ಅರ್ಜಿಯನ್ನು ಭಾಗಶಃ ಪುರಸ್ಕರಿಸಿದ ನ್ಯಾಯಮೂರ್ತಿ ಎಂಜಿಎಸ್ ಕಮಲ್ ಅವರ ಪೀಠ ಈ ಆದೇಶ ನೀಡಿದೆ. ಚುನಾವಣಾ ಆಯೋಗ ಮತ್ತು ವಿಧಾನಸಭೆ ಕಾರ್ಯದರ್ಶಿಗೆ ರವಾನಿಸಲು ನ್ಯಾಯಪೀಠ ರಿಜಿಸ್ಟರ್ಗೆ ಸೂಚನೆ ನೀಡಿದೆ. ವಿಸ್ತöÈತ ಆದೇಶ ಇನ್ನಷ್ಟೇ ಬಿಡುಗಡೆಯಾಗಬೇಕಿದೆ.
ಇದೇ ವೇಳೆ ಮುನಿರಾಜು ಅವರನ್ನು ವಿಜೇತ ಅಭ್ಯರ್ಥಿಯಾಗಿ ಘೋಷಣೆ ಮಾಡಲು ನ್ಯಾಯಪೀಠ ನಿರಾಕರಿಸಿದೆ. ಮತ್ತೊಂದೆಡೆ ಆದೇಶ ಪ್ರಕಟವಾಗುತ್ತಿದ್ದ ಬೆನ್ನಲ್ಲೇ ಸುಬ್ಬಾರೆಡ್ಡಿ ಪರ ವಕೀಲರು, ನ್ಯಾಯಾಲಯದ ಈ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಲಾಗುವುದು. ಅಲ್ಲಿಯವರೆಗೆ ಈ ಆದೇಶಕ್ಕೆ ತಡೆಯಾಜ್ಞೆ ನೀಡಬೇಕು ಎಂದು ಕೋರಿದರು. ಈ ಮನವಿಗೆ ಅರ್ಜಿದಾರರ ಪರ ವಕೀಲರು ಆಕ್ಷೇಪಿಸಿದರು. ಈ ಕುರಿತು ವಾದ-ಪ್ರತಿಪಾದ ಆಲಿಸಿದ ನ್ಯಾಯಪೀಠ, ತನ್ನ ಆದೇಶಕ್ಕೆ ತಡೆಯಾಜ್ಞೆ ನೀಡಲು ನಿರಾಕರಿಸಿತು. ರಿಜಿಸ್ಟರ್
ಬಾಗೇಪಲ್ಲಿ ಕಾಂಗ್ರೆಸ್ ಶಾಸಕ ಸುಬ್ಬಾರೆಡ್ಡಿ ಆಯ್ಕೆಯೇ ಅಸಿಂಧು!



