ಅಹಮದಾಬಾದ್: ಪ್ರಧಾನಿ ನರೇಂದ್ರ ಮೋದಿ ಅವರನ್ನು ಅವಹೇಳನಾಕಾರಿಯಾಗಿ ಟೀಕಿಸಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ದೋಷಿ ಎಂದು ತೀರ್ಪು ನೀಡಿರುವ ಸೂರತ್ ನ್ಯಾಯಾಲಯ ಎರಡು ವರ್ಷ ಶಿಕ್ಷೆ ವಿಧಿಸಿದೆ. ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದ ಬೆನ್ನಲ್ಲೇ ಜಾಮೀನು ಸಹ ಮಂಜೂರು ಮಾಡಲಾಗಿದೆ.
ಎಲ್ಲಾ ಕಳ್ಳರು ಮೋದಿಯನ್ನು ಸಾಮಾನ್ಯ ಉಪನಾಮವನ್ನಾಗಿ ಮಾಡಿಕೊಂಡಿರುವುದು ಹೇಗೆ? ಎಂಬ ಟೀಕೆಗಳ ಮೇಲೆ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ಶಾಸಕ ಮತ್ತು ಗುಜರಾತ್‍ನ ಮಾಜಿ ಸಚಿವ ಪೂರ್ಣೇಶ್ ಮೋದಿ ಅವರು ದೂರು ನೀಡಿದ್ದರು.
ರಾಹುಲ್ ಗಾಂಧಿಗೆ 2 ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿದ್ದ ಸೂರತ್ ನ್ಯಾಯಾಲಯ 30 ದಿನಗಳಿಗೆ ಜಾಮೀನು ಮಂಜೂರು ಮಾಡಿದೆ.
ರಾಹುಲ್ ಅವರು ಕೋಲಾರದಲ್ಲಿ ನಡೆದಿದ್ದ ರ್ಯಾಲಿಯಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಮೋದಿ ಉಪನಾಮ ಹೊಂದಿರುವವರನ್ನೆಲ್ಲಾ ನಿಂದಿಸಿದ್ದಾರೆ ಎಂದು ಅರ್ಜಿದಾರರ ಪರ ವಕೀಲರು ನ್ಯಾಯಪೀಠಕ್ಕೆ ಮನವರಿಕೆ ಮಾಡಿದ್ದರು. ರಾಹುಲ್ ವಿರುದ್ಧ ಮಾನನಷ್ಟ ಪ್ರಕರಣ ದಾಖಲಿಸಲಾಗಿತ್ತು.
ನ್ಯಾಯಾಲಯವು ಕಳೆದ ವಾರ ಎರಡೂ ಕಡೆಯ ಅಂತಿಮ ವಾದಗಳನ್ನು ಆಲಿಸಿದೆ ಮತ್ತು ನಾಲ್ಕು ವರ್ಷಗಳ ಹಿಂದಿನ ಮಾನನಷ್ಟ ಮೊಕದ್ದಮೆಯ ತೀರ್ಪುನ್ನು ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಎಚ್‍ಎಚ್ ವರ್ಮಾ ಆಲಿಸಿದ್ದಾರೆ.
ಭಾರತೀಯ ದಂಡ ಸಂಹಿತೆ ((IPC) ಸೆಕ್ಷನ್ 499 ಮತ್ತು 500 (ಮಾನನಷ್ಟ ವ್ಯವಹರಿಸುವುದು) ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ರಾಹುಲ್ ಗಾಂಧಿಯ ಅವರು ಕೊನೆಯದಾಗಿ 2021ರ ಅಕ್ಟೋಬರ್‍ನಲ್ಲಿ ತಮ್ಮ ಹೇಳಿಕೆಯನ್ನು ದಾಖಲಿಸಲು ಸೂರತ್ ನ್ಯಾಯಾಲಯಕ್ಕೆ ಹಾಜರಾಗಿದ್ದರು.
Leave a Review