ಬೆಂಗಳೂರು: ಮುಸ್ಲಿಂ ಮೀಸಲಾತಿಯನ್ನು ರದ್ದುಗೊಳಿಸಿ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ ನೀಡಿದೆ.
ನ್ಯಾ. ಕೆ.ಎಂ.ಜೋಸೆಫ್ ಅವರಿದ್ದ ಸುಪ್ರೀಂಕೋರ್ಟ್‍ನ ನ್ಯಾಯಪೀಠ ಇಂದು ಈ ಮಹತ್ವದ ಆದೇಶ ಹೊರಡಿಸಿದೆ.
ಮೀಸಲಾತಿ ಪರಿಷ್ಕರಣೆ ಸಂದರ್ಭದಲ್ಲಿ ಮುಸ್ಲಿಂರಿಗಿದ್ದ ಶೇ.4ರಷ್ಟು 2ಬಿ ಮೀಸಲಾತಿಯನ್ನು ರದ್ದುಗೊಳಿಸಲಾಗಿತ್ತು. 2ಬಿ ಮೀಸಲಾತಿಯನ್ನು ರದ್ದುಗೊಳಿಸಿದ್ದ ರಾಜ್ಯ ಸರ್ಕಾರ ಅದನ್ನು 2ಸಿ, 2ಡಿ ವರ್ಗಕ್ಕೆ ತಲಾ ಶೇ.2ರಷ್ಟು ಹಂಚಿಕೆ ಮಾಡಲಾಗಿತ್ತು.
ಲಿಂಗಾಯಿತ ಹಾಗೂ ಒಕ್ಕಲಿಗರಿಗೆ ತಲಾ ಶೇ.2ರಷ್ಟು ಹಂಚಿಕೆ ಮಾಡಿದ್ದನ್ನು ಹಾಗೂ ತಮಗಿದ್ದ 2ಬಿ ಮೀಸಲಾತಿಯನ್ನು ರದ್ದುಗೊಳಿಸಿದ ರಾಜ್ಯ ಸರ್ಕಾರದ ಆದೇಶವನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‍ನಲ್ಲಿ ಅರ್ಜಿ ಸಲ್ಲಿಸಲಾಗಿತ್ತು. ರಾಜ್ಯ ಸರ್ಕಾರದ ಆದೇಶಕ್ಕೆ ತಡೆ ನೀಡುವ ಉಚ್ಛನ್ಯಾಯಾಲಯ ವಿಚಾರಣೆಯನ್ನು ಮೇ 9ಕ್ಕೆ ಮುಂದೂಡಿದೆ.
Leave a Review