ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೃಷ್ಣರಾಜ ಸಾಗರ ಜಲಾಶಯದ ನೀರಿನ ಮಟ್ಟ ಇದೀಗ 110 ಅಡಿಗೆ ಇಳಿದಿದೆ.
124.80 ಅಡಿ ಗರಿಷ್ಠ ಸಾಮರ್ಥ್ಯ ಹೊಂದಿರುವ ಜಲಾಶಯದಲ್ಲಿ ಸದ್ಯ 110.44 ಅಡಿ ನೀರು ಇದ್ದು, ಸುಮಾರು 32.167 ಟಿಎಂಸಿ ನೀರು ಸಂಗ್ರಹವಾಗಿದೆ. ಹೀಗಾಗಿ ಈ ಬಾರಿ ಕುಡಿಯುವ ನೀರಿಗೆ ಸಮಸ್ಯೆಯಾಗುತ್ತಾ ಎಂಬ ಆತಂಕ ಶುರುವಾಗಿದೆ.



