ಬೆಂಗಳೂರು: 11 ದಿನಗಳ ಕಾಲ ನಡೆಯುವ ವಿಶ್ವವಿಖ್ಯಾತ ಬೆಂಗಳೂರು ಕರಗ ಉತ್ಸವಕ್ಕೆ ಇಂದು ಚಾಲನೆ ಸಿಗಲಿದೆ. ಇಂದು ಸಂಜೆ ತಿಗಳರಪೇಟೆಯ ಶ್ರೀ ಧರ್ಮರಾಯ ಸ್ವಾಮಿ ದೇವಾಲಯದಲ್ಲಿ ಧ್ವಜಾರೋಹಣ ಮೂಲಕ ಉತ್ಸವಕ್ಕೆ ಅಧಿಕೃತ ಚಾಲನೆ ಸಿಗಲಿದೆ.
ಒಟ್ಟು 11 ದಿನಗಳ ಕಾಲ ನಡೆಯುವ ಈ ಉತ್ಸವದಲ್ಲಿ ಮಾ.30ರಂದು ಹಸಿ ಕರಗವಿದ್ದು, ಏ.1ರಂದು ಮಧ್ಯರಾತ್ರಿ ಕರಗ ಶಕ್ತ್ಯೋತ್ಸವ ನಡೆಯಲಿದೆ. ಈ ದಿನವೇ ದ್ರೌಪದಿ ದೇವಿಯ ಹೂವಿನ ಕರಗವು ಸಂಚರಿಸಿ ಲಕ್ಷಾಂತರ ಭಕ್ತರಿಗೆ ದರ್ಶನ ನೀಡಲಿದೆ. ಈ ಬಾರಿಯು ಎ.ಜ್ಞಾನೇಂದ್ರ ಸ್ವಾಮಿ ಕರಗ ಹೊರಲಿದ್ದಾರೆ. ಸುಮಾರು 10 ಲಕ್ಷಕ್ಕೂ ಅಧಿಕ ಭಕ್ತರು ಭಾಗವಹಿಸುವ ನಿರೀಕ್ಷೆಯಿದೆ. ಕರಗ ಶಕ್ತ್ಯೋತ್ಸವ ಕುರಿತು ಇಂದು ಸುದ್ದಿಗೋಷ್ಠಿ ನಡೆಯಲಿದೆ.



