ಯಲಹಂಕ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಗುರುವಾರ ರಾತ್ರಿ ಲಾಡ್ಜ್ ಒಂದರಲ್ಲಿ 16 ವರ್ಷದ ಪಿಯು ವಿದ್ಯಾರ್ಥಿನಿಗೆ ಬಲವಂತವಾಗಿ ಮದ್ಯ ಕುಡಿಸಿ, ನಂತರ ಆಕೆಯ 17 ವರ್ಷದ ಗೆಳೆಯ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ. ಕೃತ್ಯದಲ್ಲಿ ಇತರ ಇಬ್ಬರು ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದ್ದು, ಇದು ಸಾಮೂಹಿಕ ಅತ್ಯಾಚಾರ ಪ್ರಕರಣವೇ ಎಂದು ಖಚಿತಪಡಿಸಿಕೊಳ್ಳಲು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಸಂತ್ರಸ್ತೆ ಮತ್ತು ಆರೋಪಿ ಇಬ್ಬರೂ ಕೇರಳದವರು. ಬಾಲಕಿ ತನ್ನ ಹೆತ್ತವರೊಂದಿಗೆ ನಗರದಲ್ಲಿ ವಾಸಿಸುತ್ತಿದ್ದು, ಪ್ರಸಿದ್ಧ ಕಾಲೇಜಿನಲ್ಲಿ ಪ್ರಥಮ ವರ್ಷದ ಪಿಯು ವ್ಯಾಸಂಗ ಮಾಡುತ್ತಿದ್ದಾಳೆ. ಹದಿನೇಳುವರೆ ವರ್ಷದ ಆರೋಪಿ ಕಾಲೇಜು ಬಿಟ್ಟಿದ್ದು, ದೇವನಹಳ್ಳಿ ನಿವಾಸಿಯಾಗಿದ್ದಾನೆ. ಘಟನೆ ನಡೆದಾಗ ಕೋಣೆಯಲ್ಲಿದ್ದ ಅವನ ಇಬ್ಬರು ಸ್ನೇಹಿತರು ವಯಸ್ಕರಾಗಿದ್ದು, ಅವರ ಪಾತ್ರದ ಬಗ್ಗೆಯೂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಆರೋಪಿ ಮತ್ತು ಸಂತ್ರಸ್ತೆ ಒಂದು ತಿಂಗಳ ಹಿಂದೆ ಕಾಲೇಜು ಕಾರ್ಯಕ್ರಮವೊಂದರಲ್ಲಿ ಭೇಟಿಯಾಗಿದ್ದರು ಮತ್ತು ಸಾಮಾಜಿಕ ಮಾಧ್ಯಮದಲ್ಲಿ ಚಾಟ್ ಮಾಡಿದ ನಂತರ ಇಬ್ಬರು ಕ್ಲೋಸ್ ಆಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಪೋಷಕರಿಗೆ ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿ ಸಂತ್ರಸ್ತೆ ಪತ್ತೆಯಾಗಿದ್ದಾರೆ.



