ಕೊಪ್ಪಳ: ಸಿನಿಮಿಯ ರೀತಿಯಲ್ಲಿ ಮಾರಕಾಸ್ತçಗಳಿಂದ ಕೊಚ್ಚಿ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷನನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ಗಂಗಾವತಿ ನಗರದಲ್ಲಿ ನಡೆದಿದೆ.ವೆಂಕಟೇಶ ಕುರುಬರ (೩೧) ವರ್ಷ ಕೊಲೆಯಾದ ಬಿಜೆಪಿ ನಾಯಕ ಎಂದು ತಿಳಿದುಬಂದಿದೆ. ಕೊಪ್ಪಳ ರಸ್ತೆಯ ಲೀಲಾವತಿ ಎಲುಬು ಕೀಲು ಅಸ್ಪತ್ರೆಯ ಮುಂಭಾಗದಲ್ಲಿ ನಸುಕಿನ ಜಾವ ೨ ಗಂಟೆಗೆ ಕಾರಿನಲ್ಲಿ ಆಗಮಿಸಿದ್ದ ಗ್ಯಾಂಗ್ ಕೊಲೆ ಮಾಡಿದೆ.
ದೇವಿಕ್ಯಾಂಪ್ನಿAದ ಗಂಗಾವತಿಗೆ ವೆಂಕಟೇಶ್ ಅವರು ಸ್ನೇಹಿತರ ಜೊತೆ ಊಟ ಮಾಡಿ ಬೈಕಿನಲ್ಲಿ ಬರುತ್ತಿದ್ದರು. ಅವರನ್ನು ಹಿಂಬಾಲಿಸಿಕೊAಡು ಬAದಿದ್ದ ಗ್ಯಾಂಗ್ ಸದಸ್ಯರು ಬೈಕಿಗೆ ಗುದ್ದಿ ಕೊಲೆ ಮಾಡಿ ಪರಾರಿಯಾಗಿದ್ದಾರೆ.ಸ್ಥಳಕ್ಕೆ ಡಿವೈಸ್ಪಿ ಸಿದ್ದನಗೌಡ ಪಾಟೀಲ್ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಪ್ರಕರಣದ ಬಗ್ಗೆ ವೆಂಕಟೇಶ ಸ್ನೇಹಿತ ರಾಮು ಪ್ರತಿಕ್ರಿಯಿಸಿ, ಸ್ನೇಹಿತರೆಲ್ಲರೂ ಊಟಕ್ಕೆ ಹೋಗಿದ್ದೆವು. ವಾಪಸ್ ಮರಳುತ್ತಿದ್ದಾಗ ೭-೮ ಜನ ಮಾರಾಕಾಸ್ತçಗನ್ನು ಹಿಡಿದು ನಮ್ಮನ್ನು ಬೆದರಿಸಿ ಹಲ್ಲೆ ಮಾಡಿ ಪರಾರಿಯಾಗಿದ್ದಾರೆಎಂದು ತಿಳಿಸಿದರು