ಬೆಂಗಳೂರು: ಈ ಬಾರಿ ಲೋಕಸಭೆ ಚನಾವಣೆಗೆ ಬಿಜೆಪಿ ಪಕ್ಷದ ಅಭ್ಯರ್ಥಿಗಳ ಆಯ್ಕೆ ವಿನೂತನ ರೀತಿಯಾಗಿದೆ ಎಂದು ಮಾಜಿಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅಭಿಪ್ರಾಯಪಟ್ಟಿದ್ದಾರೆ.
ಇಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ನಿವಾಸಕ್ಕೆ ಭೇಟಿ ನೀಡಿದ್ದ ಬೊಮ್ಮಾಯಿ ಅವರು, ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಡಾ. ಮಂಜುನಾಥ್ ಅವರು ಲಕ್ಷಾಂತರ ಜನರಿಗೆ ಆರೋಗ್ಯ ಕಾಪಾಡಿದ್ದಾರೆ. ಒಳ್ಳೆಯ ಕೆಲಸ ಮಾಡಿದವರಿಗೆ ಪಕ್ಷ ಪುರಸ್ಕಾರ ನೀಡುತ್ತದೆ ಅನ್ನುವ ಸಂದೇಶ ನೀಡಿದೆ. ಮತ್ತೆ ಮಹಾರಾಜ ಯದುವೀರ ಒಡೆಯರ್ ಅವರಿಗೆ ಟಿಕೆಟ್ ನೀಡಿರುವುದು ದಕ್ಷಿಣ ಕರ್ನಾಟಕದಲ್ಲಿ ಒಳ್ಳೆಯ ಸಂದೇಶ ನೀಡಿದಂತಾಗಿದೆ ಎಂದಿದ್ದಾರೆ.
ದಕ್ಷಿಣ ಭಾರತದಲ್ಲಿ ಅಭಿವೃದ್ಧಿ ಆಗಿದ್ದರೆ ಅದಕ್ಕೆ ಒಡೆಯರ್ ಅವರು ಕಾರಣ. ಅವರು ಹಿಂದುಳಿದ ವರ್ಗದವರ ಅಭಿವೃದ್ಧಿ ಮಾಡಿದ್ದಾರೆ. ಆ ಮನೆತನಕ್ಕೆ ಟಿಕೆಟ್ ನೀಡಿರುವುದು ದಕ್ಷಿಣ ಕರ್ನಾಟಕಕ್ಕೆ ಸಂತಸ ತಂದಿದೆ. ಹಳೆ ಬೇರು, ಹೊಸ ಚಿಗುರಿಗೂ ಅವಕಾಶ ನೀಡಿದೆ. ಈ ರೀತಿ ನಿರ್ಣಯ ಬಿಜೆಪಿಯಲ್ಲಿ ಮಾತ್ರ ಸಾಧ್ಯ ಎಂದರು.
ಲೋಕಸಭೆ ಚುನಾವಣೆಯಲ್ಲಿ ಸೋಲುವ ಭೀತಿಯಿಂದ ಕಾಂಗ್ರೆಸ್ ನಿಂದ ಸ್ಪರ್ಧೆ ಮಾಡಲು ಅಭ್ಯರ್ಥಿಗಳು ಸಿಗುತ್ತಿಲ್ಲ. ಸಚಿವರೂ ಸ್ಪರ್ಧಿಸಲು ಹಿಂದೇಟು ಹಾಕುತ್ತಿದ್ದಾರೆ ಎಂದು ಇದೇ ಸಂದರ್ಭದಲ್ಲಿ ಬೊಮ್ಮಾಯಿ ಅಭಿಪ್ರಾಯಪಟ್ಟಿದ್ದಾರೆ.ನಿನ್ನೆ ಪಕ್ಷದ ವರಿಷ್ಠರು ನಿರ್ಷಯ ಮಾಡಿ ಪ್ರಕಟಣೆ ಮಾಡಿದ್ದಾರೆ. ಸದಾಕಾಲ ರಾಜಕೀಯವಾಗಿ ಆಶಿರ್ವಾದ ಮಾಡಿ ಯಡಿಯೂರಪ್ಪ ಅವರು ಹರಸಿದ್ದಾರೆ.
ಅವರ ಆಶಿರ್ವಾದ ಪಡೆದಿದ್ದೇನೆ. ಪ್ರಚಾರಕ್ಕೂ ಕೂಡ ಬರುತ್ತೇನೆ ಅಂತ ಹೇಳಿದ್ದಾರೆ ಎಂದು ಹೇಳಿದರು.ಕಾಂಗ್ರೆಸ್ನಲ್ಲಿ ಆ ಪರಿಸ್ಥಿತಿ ಇಲ್ಲ. ಸಚಿವರೂ ಸೋಲುವ ಭಯದಲ್ಲಿ ಇದ್ದಾರೆ. ಟಿಕೆಟ್ ಸಿಗದ ಸಂಸದರು ನಮ್ಮ ಸಂಪರ್ಕದಲ್ಲಿದ್ದಾರೆ ಅನ್ನುವುದು ಡಿಸಿಎಂ ಡಿಕೆಶಿವಕುಮಾರ್ ಅವರ ಚಾಳಿಯಾಗಿದೆ. ಅವರ ಪಕ್ಷದಲ್ಲಿ ಸ್ಪರ್ಧಿಸಲು ಅಭ್ಯರ್ಥಿಗಳು ಸಿಗುತ್ತಿಲ್ಲ ಎಂದರು.