ಕೆ.ಪಿ.ನವಮೋಹನ್, ಚಿಕ್ಕಬಳ್ಳಾಪುರ
ಚಿಕ್ಕಬಳ್ಳಾಪುರ : ಅಂತಃಕರಣವಿಲ್ಲದ ಜೀವನಕ್ಕೆ ಯಾವುದೇ ಬೆಲೆ ಇರುವುದಿಲ್ಲ. ವಿಜ್ಞಾನಕ್ಕೆ ಆಧಾರಗಳಿರುತ್ತವೆ, ಆದರೆ ನಂಬಿಕೆಗೆ ಯಾವುದೇ ಆಧಾರ ಇರುವುದಿಲ್ಲ. ಸಮಾಜದಲ್ಲಿ ಪ್ರಶ್ನಿಸುವ ಅಧಿಕಾರ ಪತ್ರಕರ್ತರಿಗೆ ಮಾತ್ರ ಇದೆ. ಪತ್ರಕರ್ತರು ಕೇಳುವ ಪ್ರಶ್ನೆಗಳು ಸಡಿಲವಾಗಿರಬಾರದು. ಅದೇ ವೇಳೆ ಪ್ರಶ್ನೆಗಾಗಿ ಪ್ರಶ್ನೆ ಮಾಡುವ ಪ್ರವೃತ್ತಿಯೂ ಇರಬಾರದು ಎಂದು ಹೇಳಿದರು.ನಗರದ ಕನ್ನಡ ಭವನದಲ್ಲಿ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಭಾನುವಾರ ಕನ್ನಡ ಭವನದಲ್ಲಿ ನಡೆದ 2026ನೇ ಸಾಲಿನ ರಾಜ್ಯಮಟ್ಟದ ರಾಜ್ಯ ಮಟ್ಟದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.ರಾಜಕಾರಣಿಗಳನ್ನು ಸಾಮಾನ್ಯವಾಗಿ ಅಧಿಕಾರದಲ್ಲಿದ್ದಾಗ ಕಾರ್ಯಕ್ರಮಗಳಿಗೆ ಆಹ್ವಾನಿಸುತ್ತಾರೆ. ಆದರೆ ಅಧಿಕಾರದಲ್ಲಿ ಇಲ್ಲದಿದ್ದರೂ ತಮ್ಮನ್ನು ಆಹ್ವಾನಿಸಿರುವುದಕ್ಕೆ ಸಂಘಟಕರಿಗೆ ಧನ್ಯವಾದ ಸಲ್ಲಿಸುತ್ತೇನೆ ಎಂದ ಅವರು ಇತ್ತೀಚಿನ ದಿನಗಳಲ್ಲಿ ಶಾಲು, ಮಾಲೆ ಹಾಗೂ ಸನ್ಮಾನಗಳು ಕೆಲವೊಮ್ಮೆ ಅನರ್ಹರಿಗೂ ದೊರೆಯುತ್ತಿರುವುದು ವಿಷಾದನೀಯ. ಡಿಜಿಟಲ್ ಮಾಧ್ಯಮಗಳಲ್ಲಿ ಯಾವುದು ಸತ್ಯ, ಯಾವುದು ಸುಳ್ಳು ಎಂಬುದನ್ನು ಗುರುತಿಸುವುದು ಕಷ್ಟವಾಗುತ್ತಿದೆ. ಮುದ್ರಣ ಮಾಧ್ಯಮ ಇಲ್ಲದಿದ್ದರೆ ರಾಜಕಾರಣಿಗಳು ಜನರಿಗೆ ಪರಿಚಿತರಾಗುತ್ತಿರಲಿಲ್ಲ. ಪತ್ರಕರ್ತರು ಮತ್ತು ರಾಜಕಾರಣಿಗಳ ಸಂಬAಧ ಗಂಡ-ಹೆAಡತಿಯ ಸಂಬAಧದAತೆ ಪರಸ್ಪರ ಅವಲಂಬಿತವಾಗಿದೆ ಎಂದು ಹಾಸ್ಯಚಟಾಕಿ ಹಾರಿಸಿದರು.
ರಾಜಕಾರಣಿಗಳಿಗೆ ನಿವೃತ್ತಿ ಎಂಬುದಿಲ್ಲ. ಪತ್ರಕರ್ತರಿಗೂ ಅದೇ ಅನ್ವಯಿಸುತ್ತದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹುದ್ದೆಗೆ ರಾಜೀನಾಮೆ ನೀಡಬಹುದು, ಆದರೆ ರಾಜಕೀಯಕ್ಕೆ ರಾಜೀನಾಮೆ ನೀಡಲು ಸಾಧ್ಯವಿಲ್ಲ. ಅದೇ ರೀತಿ ಪತ್ರಕರ್ತರೂ ಸಮಾಜದ ಜವಾಬ್ದಾರಿಯಿಂದ ದೂರ ಉಳಿಯಲು ಸಾಧ್ಯವಿಲ್ಲ. “ನೀವೂ ಕೂಡ ರಾಜಕಾರಣಿಗಳೇ, ನಾವೂ ಕೂಡ ಪತ್ರಕರ್ತರೇ” ಎಂದು ಅವರು ಅಭಿಪ್ರಾಯಪಟ್ಟರು.
ಚಿಕ್ಕಬಳ್ಳಾಪುರ ಮತ್ತು ಕೋಲಾರ ಭಾಗದ ಮಣ್ಣು ಅತ್ಯಂತ ಫಲವತ್ತಾಗಿದೆ. ರೈತರ ಬೆವರಿನ ಹನಿ ಭೂಮಿಗೆ ಬಿದ್ದರೆ ಉತ್ತಮ ಫಸಲು ನೀಡುವ ಸಾಮರ್ಥ್ಯ ಈ ನೆಲಕ್ಕಿದೆ. ಆದರೆ ನೀರಿನ ಕೊರತೆ ಈ ಭಾಗದ ದೊಡ್ಡ ಸಮಸ್ಯೆಯಾಗಿದೆ. ಎತ್ತಿನಹೊಳೆಯನ್ನು ಬೇಗ ಹರಿಸಿ ರೈತರ ಕಷ್ಟ ನೀಗಿಸಬೇಕಿದೆ ಆಡಳಿತ ಪಕ್ಷಕ್ಕೆ ಸಲಹೆ ನೀಡಿದರು.
ತಾವು ನೀರಾವರಿ ಸಚಿವರಾಗಿದ್ದ ಸಂದರ್ಭದಲ್ಲಿ ಈ ಭಾಗದ ಜನರು ಫ್ಲೋರೈಡ್ ಸಮಸ್ಯೆ ಪರಿಹರಿಸು
ವಂತೆ ಮನವಿ ಮಾಡಿದ್ದರು. ಅದರ ಹಿನ್ನೆಲೆಯಲ್ಲಿ ಸಮೀಕ್ಷೆ ನಡೆಸಿ ಎತ್ತಿನಹೊಳೆ ಯೋಜನೆ ರೂಪಿಸಲಾಯಿತು. ಆಗ ನೇತ್ರಾವತಿ ತಿರುವು ಯೋಜನೆ ಚರ್ಚೆಯಲ್ಲಿದ್ದರೂ ಅದನ್ನು ಬದಿಗೊತ್ತಿ ಎತ್ತಿನಹೊಳೆ ಯೋಜನೆಗೆ ಆದ್ಯತೆ ನೀಡಲಾಯಿತು. ಭೂಸ್ವಾಧೀನ ಸಮಸ್ಯೆಯಿಂದ ಯೋಜನೆ ಪೂರ್ಣಗೊಳ್ಳಲು ವಿಳಂಬವಾಗಿದ್ದು, ಸರ್ಕಾರ ಈ ಭಾಗದ ಜನರ ಕುಡಿಯುವ ನೀರಿನ ಸಮಸ್ಯೆಯನ್ನು ಶೀಘ್ರವಾಗಿ ಬಗೆಹರಿಸಬೇಕು ಎಂದು ಆಗ್ರಹಿಸಿದರು.
ಅಂತರರಾಜ್ಯ ಜಲ ವಿವಾದ ನ್ಯಾಯಮಂಡಳಿಗಳ ವ್ಯವಸ್ಥೆಯನ್ನು ಪುನರ್ಪರಿಶೀಲಿಸುವ ಕುರಿತು ಸಂಸತ್ತಿನಲ್ಲಿ ಗಮನ ಸೆಳೆದಿರುವುದಾಗಿ ತಿಳಿಸಿದ ಅವರು, ನೀರು ಜನರ ಬದುಕಿನ ಪ್ರಶ್ನೆಯಾಗಿದ್ದು, ಜನರ ಜ್ವಲಂತ ಸಮಸ್ಯೆಗಳ ಬಗ್ಗೆ ಮಾಧ್ಯಮಗಳು ಹೆಚ್ಚಿನ ಗಮನ ಹರಿಸಬೇಕು ಎಂದು ಮನವಿ ಮಾಡಿದರು.
ತಮ್ಮ ಮುಖ್ಯಮಂತ್ರಿಗಳ ಅವಧಿಯಲ್ಲಿ ಸ್ಥಳೀಯ ಪತ್ರಿಕೆಗಳಿಗೆ ಹೆಚ್ಚಿನ ಜಾಹೀರಾತು ನೀಡುವ ಕೆಲಸ ಮಾಡಲಾಗಿದೆ. ಅಲ್ಲದೆ ಹಿಂದುಳಿದ ವರ್ಗಗಳ ಪತ್ರಕರ್ತರು ನಡೆಸುವ ಸ್ಥಳೀಯ ಪತ್ರಿಕೆಗಳಿಗೂ ಜಾಹೀರಾತು ನೀಡುವ ಮೂಲಕ ಪ್ರೋತ್ಸಾಹ ನೀಡಲಾಗಿದೆ. ಎಲ್ಲ ಸಮುದಾಯಗಳ ಧ್ವನಿಯೂ ಮುಖ್ಯವಾಹಿನಿಗೆ ಬರಬೇಕು. ಪ್ರಜಾಪ್ರಭುತ್ವದಲ್ಲಿ ಎಲ್ಲರ ಧ್ವನಿಗೂ ಸಮಾನ ಅವಕಾಶ ದೊರೆಯಬೇಕು ಎಂದು ಹೇಳಿದ ಅವರು ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡುತ್ತಿರುವ ಕಾರ್ಯಕ್ರಮವನ್ನು ಶ್ಲಾಘಿಸಿ, ವಿದ್ಯಾರ್ಥಿಗಳ ಉಜ್ವಲ ಭವಿಷ್ಯಕ್ಕೆ ಶುಭ ಹಾರೈಸಿದರು.
ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ನಾನು ಅಧ್ಯಕ್ಷನಾಗುವ ಮೊದಲು ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರದ ಕಾರ್ಯಕ್ರಮ ನಡೆಯುತ್ತಿರಲಿಲ್ಲ.ಇದನ್ನು ಪ್ರಾರಂಭಿಸಿ ಮೊದಲಿಗೆ ಬೆಂಗಳೂರಿನಲ್ಲಿ ನಡೆಸಲಾಯಿತು.ಮಂಗಳೂರು, ಹಾವೇರಿ, ಮಹದೇಶ್ವರಬರಟ್ಟ, ಈಗ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ ಎಂದರು.
ಸಮಾಜದ ಕಣ್ಣು ಮತ್ತು ಕಿವಿಯಾಗಿ ಕಾರ್ಯನಿರ್ವಹಿಸುವ ಪತ್ರಕರ್ತರು ಅನೇಕ ಸವಾಲುಗಳ ನಡುವೆ ತಮ್ಮ ಕರ್ತವ್ಯ ನಿರ್ವಹಿಸುತ್ತಾರೆ. ಅವರ ಬಿಡುವಿರದ ಕಾರ್ಯಬಾಹುಳ್ಯದ ನಡುವೆ ಮಕ್ಕಳ ಶಿಕ್ಷಣ ಮತ್ತು ಸಾಧನೆಗೆ ನೀಡುತ್ತಿರುವ ಪ್ರೋತ್ಸಾಹ ಶ್ಲಾಘನೀಯವಾಗಿದೆ ಎಂದರು.
ಪತ್ರಕರ್ತರು ಇಂದು ಪಡೆದಿರುವ ಅನೇಕ ಸೌಲತ್ತುಗಳು ನಮಗೆ ಬರಲು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾಗಿ ಕೆಲಸ ಮಾಡಿದ್ದ ಪ್ರಭಾಕರ್ ಕಾರಣ ಎಂಬುದನ್ನು ಮರೆಯುವಂತಿಲ್ಲ.ಪತ್ರಕರ್ತರ ಮೇಲೆ ಸಮಾಜ ಇಟ್ಟಿರುವ ನಂಬಿಕೆಯನ್ನು ಉಳಿಸಿಕೊಂಡು ಕಾರ್ಯ ನಿರ್ವಹಿಸಬೇಕಿದೆ ಎಂದರು.
ಪ್ರತಿಭಾ ಪುರಸ್ಕಾರ ಸ್ವೀಕರಿಸುತ್ತಿರುವ ವಿದ್ಯಾರ್ಥಿಗಳು ಕೇವಲ ತಮ್ಮ ಕುಟುಂಬಕ್ಕಷ್ಟೇ ಅಲ್ಲ, ಇಡೀ ಪತ್ರಕರ್ತ ಸಮುದಾಯಕ್ಕೂ ಹೆಮ್ಮೆ ತಂದಿದ್ದಾರೆ. ಪ್ರತಿಭೆ ಎನ್ನುವುದು ಕೇವಲ ಅಂಕಗಳಿಗೆ ಸೀಮಿತವಾಗಿರುವುದಿಲ್ಲ. ಉತ್ತಮ ಸಂಸ್ಕಾರ, ಶಿಸ್ತು, ಮಾನವೀಯತೆ ಮತ್ತು ಸಮಾಜದ ಬಗ್ಗೆ ಕಾಳಜಿ ಕೂಡ ನಿಜವಾದ ಶಿಕ್ಷಣದ ಭಾಗವಾಗಿದೆ ಎಂದರು.
ವಿದ್ಯಾರ್ಥಿಗಳು ತಂತ್ರಜ್ಞಾನವನ್ನು ಸದುಪಯೋಗಪಡಿಸಿಕೊಂಡು ಜ್ಞಾನಾರ್ಜನೆ ಮಾಡಬೇಕು. ಸ್ಪರ್ಧಾತ್ಮಕ ಜಗತ್ತಿನಲ್ಲಿ ಯಶಸ್ಸು ಸಾಧಿಸಲು ನಿರಂತರ ಅಧ್ಯಯನ, ಪರಿಶ್ರಮ ಮತ್ತು ಆತ್ಮವಿಶ್ವಾಸ ಅತ್ಯಗತ್ಯ. ಸೋಲುಗಳು ಬಂದರೂ ಹತಾಶರಾಗದೆ ಅವುಗಳನ್ನು ಯಶಸ್ಸಿನ ಮೆಟ್ಟಿಲುಗಳಾಗಿ ಬಳಸಿಕೊಳ್ಳಬೇಕು. 1956ರಲ್ಲಿ ಡಿ.ವಿ.ಗುಂಡಪ್ಪ ಆದಿಯಾಗಿ ಅಂದಿನ ಮಹನೀಯರು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಎಂದು ಹೆಸರು ನೀಡಿದ್ದಾರೆ. ಅಂದಿನಿAದ ಈವರೆಗೆ ಇದೇ ಹೆಸರಿನಲ್ಲಿ ಸಾಗಿರುವ ಸಂಘವು 10 ಸಾವಿರ ಸದಸ್ಯರನ್ನು ಒಳಗೊಂಡ ವೃತಿಬದ್ಧತೆಯುಳ್ಳ ಬೃಹತ್ ಸಂಘಟನೆಯಾಗಿದೆ.ಕಡಿಮೆ ಸಮಯದಲ್ಲಿ ಕಾರ್ಯಕ್ರಮ ಮಾಡಲು ಹೇಳಿದರೂ ಚಿಕ್ಕಬಳ್ಳಾಪುರ ಸಂಘವು ಅಚ್ಚುಕಟ್ಟಾಗಿ ಕಾರ್ಯಕ್ರಮ ಆಯೋಜನೆ ಮಾಡಿ ನಂಬಿಕೆ ಉಳಿಸಿಕೊಂಡಿದೆ ಎಂದರು.
ಪತ್ರಕರ್ತರ ಮಕ್ಕಳು ಸಮಾಜದ ವಾಸ್ತವತೆಗಳನ್ನು ಹತ್ತಿರದಿಂದ ನೋಡುವ ಅವಕಾಶ ಹೊಂದಿರುತ್ತಾರೆ. ಈ ಅನುಭವವು ಅವರನ್ನು ಉತ್ತಮ ನಾಗರಿಕರನ್ನಾಗಿ ರೂಪಿಸುತ್ತದೆ. ದೇಶದ ಅಭಿವೃದ್ಧಿಗೆ ಕೊಡುಗೆ ನೀಡುವಂತಹ ಜವಾಬ್ದಾರಿಯುತ ವ್ಯಕ್ತಿಗಳಾಗಿ ಬೆಳೆಯಬೇಕು. ಇಂತಹ ಪ್ರತಿಭಾ ಪುರಸ್ಕಾರಗಳು ವಿದ್ಯಾರ್ಥಿಗಳಲ್ಲಿ ಇನ್ನಷ್ಟು ಉತ್ಸಾಹ ಮತ್ತು ಸ್ಪೂರ್ತಿಯನ್ನು ಮೂಡಿಸುತ್ತವೆ. ಕಾರ್ಯಕ್ರಮವನ್ನು ಆಯೋಜಿಸಿರುವ ಸಂಘಟನೆಗೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ಎಲ್ಲಾ ವಿದ್ಯಾರ್ಥಿಗಳಿಗೆ ಉಜ್ವಲ ಭವಿಷ್ಯವನ್ನು ಹಾರೈಸುತ್ತಾ, ಶಿಕ್ಷಣದ ಮೂಲಕ ಸಮಾಜಕ್ಕೆ ಮಾದರಿಯಾಗುವಂತೆ ಕರೆ ನೀಡುತ್ತೇನೆ.
ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಕುಲಪತಿ ಬಿ.ಕೆ.ರವಿ ಮಾತನಾಡಿ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು, ಮಾಧ್ಯಮ ಸಲಹೆಗಾರ ಪ್ರಭಾಕರ್ ಪತ್ರಕರ್ತರ ಕುಟುಂಬಕ್ಕಾಗಿ ಸಾಕಷ್ಟು ಕೆಲಸ ಮಾಡಿದ್ದಾರೆ.70ರದಶಕದಲ್ಲಿ ನಾನೂ ಕೂಡ ಪತ್ರಕರ್ತನಾಗಿದ್ದೆ.ಇಲ್ಲಿನ ಕಷ್ಟಗಳ ಅರಿವಿದೆ.ರಾಜಕಾರಣಿಗಳೇ ಮೊದಲಾಗಿ ಎಲ್ಲರೂ ಸುದ್ದಿಯಲ್ಲಿ ಕಾಣಿಸಿಕೊಳ್ಳುವವರೆಗೆ ಪತ್ರಕರ್ತರನ್ನು ನೆನೆಸುತ್ತಾರೆ. ಸುದ್ದಿ ಬಂದ ನಂತರ ಮರೆತುಬಿಡುತ್ತಾರೆ ಎಂದರು.
ಪ್ರಜಾಪ್ರಭುತ್ವದ ಮೌಲ್ಯಗಳನ್ನು ಉಳಿಸಿ ಬೆಳೆಸುವಲ್ಲಿ ಮಾಧ್ಯಮ ಕ್ಷೇತ್ರದ ಕೊಡುಗೆ ಅಪಾರವಾಗಿದೆ. ವಿಶ್ವವಿದ್ಯಾಲವು ಕೂಡ ಈ ನಿಟ್ಟಿನಲ್ಲಿ ಪತ್ರಿಕೋಧ್ಯಮದ ಪದವಿಗೆ ಒತ್ತು ನೀಡಲು ಸಂಕಲ್ಪಿಸಲಾಗಿದೆ. ಪ್ರತಿಭಾವಂತ ಮಕ್ಕಳ ಪ್ರೋತ್ಸಾಹ ಸಮಾಜದ ಕರ್ತವ್ಯವಾಗಬೇಕಿದೆ ಎಂದರು.
ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಭಾನುವಾರ ಕನ್ನಡ ಭವನದಲ್ಲಿ 2026ನೇ ಸಾಲಿನ ರಾಜ್ಯಮಟ್ಟದ ರಾಜ್ಯ ಮಟ್ಟದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಅರ್ಥಪೂರ್ಣವಾಗಿ ನಡೆಯಿತು.
ರಾಜ್ಯದ ನಾನಾ ಮೂಲೆಗಳಿಂದ ಆಗಮಿಸಿದ್ದ ಎಸ್ಎಸ್ಎಲ್ಸಿ, ಪಿಯುಸಿಯಲ್ಲಿ ಶೇ 90ಕ್ಕೂ ಹೆಚ್ಚು ಅಂಕಗಳಿಸಿದ 200ಕ್ಕೂ ಹೆಚ್ಚು ಪ್ರತಿಭಾವಂತ ವಿದ್ಯಾರ್ಥಿಗಳನ್ನು ಹಾರ ಶಾಲು ಸ್ಮರಣಿಕೆ ಜತೆಗೆ 3ಸಾವಿರ ನಗದು ನೀಡಿ ಗಣ್ಯರ ಸಮ್ಮುಖದಲ್ಲಿ ಸನ್ಮಾನಿಸಲಾಯಿತು. ಐಎಫ್ಡಬ್ಲುಯಜೆ ಅಧ್ಯಕ್ಷ ಬಿ.ವಿ.ಮಲ್ಲಿಕಾರ್ಜುನಯ್ಯ, ಸಿದ್ದರಾಮಯ್ಯ ಅವರ ಮಾಧ್ಯಮ ಸಲಹೆಗಾರರಾಗಿದ್ದ ಪ್ರಭಾಕರ್, ಜಮೀರ್ ಅಹ್ಮದ್ಖಾನ್ ಅವರ ಮಾಧ್ಯಮ ಸಲಹೆಗಾರ ಲಕ್ಷಿö್ಮನಾರಾಯಣ, ಜಿಲ್ಲಾಧಿಕಾರಿ ಜಿ.ಪ್ರಭು, ಎಸ್ಪಿ ಕುಶಾಲ್ ಚೌಕ್ಸೆ, ಕೆಯುಡಬ್ಲುಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು, ಕಾರ್ಯದರ್ಶಿ ಬಿ.ಸಿ.ಲೋಕೇಶ್, ಖಜಾಂಚಿ ಚಿಕ್ಕಬಳ್ಳಾಪುರ ಸಂಘದ ಅಧ್ಯಕ್ಷ ರವಿಕುಮಾರ್, ಪ್ರಧಾನ ಕಾರ್ಯದರ್ಶಿ ಕಾಗತಿ ನಾಗರಾಜಪ್ಪ, ರಾಜ್ಯ ಸಮಿತಿ ಸದಸ್ಯ ಚಂದ್ರಶೇಖರ್, ಖಜಾಂಚಿ ಮುದ್ದುಕೃಷ್ಣ, ಉಪಾಧ್ಯಕ್ಷ ಮುಬಾಷಿರ್ ಅಹ್ಮದ್, ಕಾರ್ಯದರ್ಶಿ ಸಂಜೆ ಸಮಾಚಾರ್ ಆನಂದ್, ಮತ್ತು ಎಲ್ಲಾ ಪದಾಧಿಕಾರಿಗಳು ಇದ್ದರು.
ಅಂತಃಕರಣವಿಲ್ಲದ ಜೀವನಕ್ಕೆ ಯಾವುದೇ ಬೆಲೆಯಿರುವುದಿಲ್ಲ: ಬಸವರಾಜ ಬೊಮ್ಮಾಯಿ



