ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಸಹಾಯಕ ಕಂದಾಯ ಅಧಿಕಾರಿಯ ಕರ್ತವ್ಯಕ್ಕೆ ತೊಂದರೆ ಮಾಡಿ ಅವಾಚ್ಯ ಶಬ್ದಗಳಿಂದ ನಿಂದಿಸಿದ ಕಂದಾಯ ಮೌಲ್ಯ ಮಾಪಕರ ವಿರುದ್ದ ಕಾರಣ ಕೇಳಿ ನೋಟಿಸ್ ಜಾರಿ ಮಾಡಿದ ಬಿಬಿಎಂಪಿ ಜಂಟಿ ಆಯುಕ್ತರು.
ಪ್ರಕರಣ ತಡವಾಗಿ ಬೆಳಕಿಗೆ ಬಂದಿದ್ದು ಬಿಬಿಎಂಪಿ ಮಹಿಳಾ ಸಿಬ್ಬಂದಿಗಳು ಆಕ್ರೋಶ ವ್ಯಕ್ತಪಡಿಸಿದ್ದು ಸೂಕ್ತ ರಕ್ಷಣೆ ಒದಗಿಸುವಂತೆ ಆಗ್ರಹಿಸಿದ್ದಾರೆ.ಚಾಮರಾಜಪೇಟೆಯ 140 ವಾರ್ಡ್ ನ ಸಹಾಯಕ ಕಂದಾಯ ಅಧಿಕಾರಿ ಲಕ್ಷೀ.ಬಿ. ಅವರ ಕರ್ತವ್ಯ ನಿರ್ವಹಣೆಗೆ ತೊಂದರೆ ಮಾಡಿ ಕಚೇರಿಯಲ್ಲಿ ಸಾರ್ವಜನಿಕರು ಹಾಗೂ ಸಿಬ್ಬಂದಿಗಳ ಸಮ್ಮುಖದಲ್ಲಿ ಅವಾಚ್ಯ ಶಬ್ದಗಳಿಂದ ನಿಂದಿಸಿದ ಕಂದಾಯ ಮೌಲ್ಯಮಾಪಕ ಗಣೇಶ್ ಅವರ ವಿರುದ್ದ ಬಂದ ದೂರಿನ ಹಿನ್ನಲೆಯಲ್ಲಿ ವಿಚಾರಣೆ ಮಾಡಿದ ಬಿಬಿಎಂಪಿ ಪಶ್ಚಿಮ ವಲಯದ ಜಂಟಿ ಆಯುಕ್ತರು ಘಟನೆ ಬಗ್ಗೆ ಲಿಖಿತ ವಿವರ ನೀಡುವಂತೆ ಕಾರಣ ಕೇಳಿ ನೋಟಿಸ್ ಜಾರಿ ಮಾಡಿದ್ದಾರೆ.
ಗಣೇಶ ಅವರು ಕರ್ತವ್ಯ ನಿರ್ವಹಣೆಯಲ್ಲಿ ವಿಫಲರಾಗಿದ್ದು ಅಲ್ಲದೆ ಕರ್ತವ್ಯ ಲೋಪವೆಸಗಿರುವುದು ಹಾಗೂ ಸಹಾಯಕ ಕಂದಾಯ ಅಧಿಕಾರಿ ಹಾಗೂ ವಿಷಯ ನಿರ್ವಾಹಕರೊಂದಿಗೆ ದುರ್ನಡತೆಯಿಂದ ವರ್ತಿಸಿರುವುದು ಕೆಸಿಎಸ್ ನಿಯಮಾವಳಿ 1966 ರ ಸರ್ಕಾರಿ ನೌಕರರ ನಡತೆ ನಿಯಮಾವಳಿಗಳ ನಿಯಮ 3(iii) ನ್ನು ಉಲ್ಲಂಘಿಸಿರುವುದುದರಿಂದ ಬಿಬಿಎಂಪ ಜಂಟಿ ಆಯುಕ್ತರು ಕಾರಣ ಕೇಳಿ ನೋಟಿಸ್ ಜಾರಿ ಮಾಡಿರುವುದಾಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.