ಕನಕಪುರ: ಬಿಸಿಲಿನ ತಾಪ ಹೆಚ್ಚುತ್ತಿರುವುದರಿಂದ ಅನಾರೋಗ್ಯದ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ ಎಲ್ಲರೂ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು ಎಂದು ತುಂಗಣಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯ ಶ್ರೀನಿವಾಸ್ ತಿಳಿಸಿದರು.
ನಗರದ ಹೊರಹೊಲೆಯದ ಬೂದಿಗುಪ್ಪೆ ಬಳಿ ಇರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ವಿಶ್ವ ಆರೋಗ್ಯ ದಿನಾಚರಣೆ ಮತ್ತು ಹೆಚ್ಚಾಗುತ್ತಿರುವ ಕಾಲರ ರೋಗ ನಿಯಂತ್ರಣದ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಕ್ರಮದಲ್ಲಿ ಮಾತಾಡಿದ ಅವರು ಬಿಸಿಲಿನ ತಾಪಮಾನ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ ದೇಹದಲ್ಲಿ ನೀರಿನ ಅಂಶ ಕಡಿಮೆಯಾಗುವ ಸಾಧ್ಯತೆ ಗಳಿವೆ, ಹೆಚ್ಚು ನೀರನ್ನು ಸೇವಿಸಬೇಕು ಇತ್ತೀಚಿಗೆ ಕಾಲರಾ ರೊಗ ಹೆಚ್ಚು ಕಾಣಿಸಿಕೊಳ್ಳುತ್ತಿದೆ ವಾಂತಿ, ಬೇದಿ ಕಾಲಾರ ದಂತಹ ರೋಗ ಲಕ್ಷಣಗಳು ಕಂಡುಬಂದರೆ ತಕ್ಷಣ ಸ್ಥಳೀಯ ಆರೋಗ್ಯ ಕೇಂದ್ರದಲ್ಲಿ ತಪಾಸಣೆ ಮಾಡಿಸಿ ಕೊಂಡು ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದರು.
ನಮ್ಮ ಆರೋಗ್ಯ ಕಾಪಾಡಿಕೊಳ್ಳಬೇಕಾದರೆ ನಮ್ಮ ಸುತ್ತಮುತ್ತಲ ಪರಿಸರದಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳಬೇಕು ಮನೆಯ ಸುತ್ತಮುತ್ತಲು ಸ್ವಚ್ಛವಾಗಿಟ್ಟುಕೊಂಡು ಸೊಳ್ಳೆ ಗಳು ಉತ್ಪತ್ತಿಯಾಗದಂತೆ ನೋಡಿಕೊಂಡು ತಮ್ಮ ತಮ್ಮ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು ಎಂದು ಸಲಹೆ ಸೂಚನೆಗಳನ್ನು ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲೆ ಶ್ಯಾಮಲಾ ಮಾತನಾಡಿ.
ಹಲವಾರು ವರ್ಷಗಳ ನಂತರ ಬಿಸಿಲಿನ ತಾಪಮಾನ ಹೆಚ್ಚಾಗಿದೆ,ಬಿಸಿಲಿನಲ್ಲಿ ಹೆಚ್ಚು ಕಾಲ ಕಳೆಯುವುದರಿಂದ ಅನಾರೋಗ್ಯದ ಸಮಸ್ಯೆಗಳು ಕಾಣಿಸಿಕೊಳ್ಳಬಹುದು ವಿದ್ಯಾರ್ಥಿಗಳು ಅನಾವಶ್ಯಕವಾಗಿ ಬಿಸಿಲಿನಲ್ಲಿ ಹೆಚ್ಚು ಓಡಾಡುವುದನ್ನು ಕಡಿಮೆ ಮಾಡಿ ಕೊಂಡು ತಮ್ಮ ಆರೋಗ್ಯದ ಬಗ್ಗೆ ಎಚ್ಚರಿಕೆ ವಹಿಸಬೇಕು ಎಂದು ಸಲಹೆ ನೀಡಿದರು.
ರೆಡ್ ಕ್ರಾಸ್ ಸಮಿತಿಯ ಸಂಚಾಲಕಿ ಸಾವಿತ್ರಿ, ದೈಹಿಕ ಶಿಕ್ಷಣ ನಿರ್ದೇಶಕ ವೆಂಕಟಾಚಲಪತಿ, ಐಕ್ಯೂಎಸಿ ಸಂಚಾಲಕ ಅಕ್ಷತಾ ಪರಂಜೋತಿ ಕುಮಾರ್, ವಾಣಿಜ್ಯ ವಿಭಾಗದ ಉಪನ್ಯಾಸಕ ಮುಜೀಬ್ ಖಾನ್, ಕನ್ನಡ ವಿಭಾಗದ ಉಪನ್ಯಾಸಕಿ ಸೌಮ್ಯ, ಸೇರಿದಂತೆ ಕಾಲೇಜಿನ ಅಧ್ಯಾಪಕ ವರ್ಗ ಹಾಗೂ ವಿದ್ಯಾರ್ಥಿಗಳು ಈ ವೇಳೆ ಉಪಸ್ಥಿತರಿದ್ದರು.