ಬೆಂಗಳೂರು : ಬೇಲೆಕೇರಿ ಬಂದರಿನಿಂದ ಅಕ್ರಮವಾಗಿ ಅದಿರು ಸಾಗಣೆ ಮತ್ತು ಮಾರಾಟ ಮಾಡಿದ ಆರೋಪ ಸಂಬಂಧ ಜಾರಿ ನಿರ್ದೇಶನಾಲಯ ದಾಖಲಿಸಿರುವ ಪ್ರಕರಣದಲ್ಲಿ ಗುರುವಾರದವರೆಗೆ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಅವರಿಗೆ ಮಧ್ಯಂತರ ವೈದ್ಯಕೀಯ ಜಾಮೀನು ವಿಸ್ತರಿಸಿ ಹೈಕೋರ್ಟ್ ಆದೇಶಿಸಿದೆ. ಅಲ್ಲದೇ, ಸೈಲ್ ಅವರನ್ನು ಆರೋಗ್ಯ ತಪಾಸಣೆಗೆ ಒಳಪಡಿಸಲು ವೃತ್ತಿಪರ ವೈದ್ಯರ ಹೆಸರನ್ನು ಜಾರಿ ನಿರ್ದೇಶನಾಲಯ ಸೂಚಿಸಬೇಕು ಎಂದು ಪೀಠ ಇದೇ ವೇಳೆ ತಿಳಿಸಿದೆ.
ಸತೀಶ್ ಸೈಲ್ಗೆ ಮಂಜೂರು ಮಾಡಲಾಗಿರುವ ವೈದ್ಯಕೀಯ ಮಧ್ಯಂತರ ಜಾಮೀನನ್ನು ಗುರುವಾರದವರೆಗೆ ವಿಸ್ತರಿಸಲಾಗಿದೆ. ಈ ಮಧ್ಯೆ, ಸೈಲ್ ಅವರ ಆರೋಗ್ಯ ಪರಿಸ್ಥತಿಗೆ ಸಂಬಂಧಿಸಿದ ದಾಖಲೆಯನ್ನು ಪರಿಶೀಲಿಸಿ ಅದನ್ನು ಖಾತರಿಪಡಿಸಲು ಯಾವ ವೈದ್ಯರನ್ನು ನೇಮಿಸಬೇಕು ಎಂಬುದಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಸಲಹೆ ನೀಡಬೇಕು ಎಂದು ಇದೇ ವೇಳೆ ಪೀಠ ಹೇಳಿದೆ.



