ಬೊಮ್ಮನಹಳ್ಳಿ: ಕಾಂಗ್ರೆಸ್ ಅಭ್ಯರ್ಥಿ ಸೌಮ್ಯ ರೆಡ್ಡಿ ಗೆಲ್ಲುವುದು ನೂರಕ್ಕೆ ನೂರು ಖಚಿತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.ಬೊಮ್ಮನಹಳ್ಳಿಯಲ್ಲಿ ನಡೆಯುತ್ತಿರುವ ಭರ್ಜರಿ ರೋಡ್ ಶೋದಲ್ಲಿ ಹತ್ತು ಸಾವಿರಕ್ಕೂ ಅಧಿಕ ಜನಸಮುದಾಯದ ಸಮುಖದಲ್ಲಿ ಈ ಬಾರಿ ಸಂಸದ ತೇಜಸ್ವಿ ಸೂರ್ಯನಿಗೆ ಸೋಲಾಗುತ್ತದೆ ಎಂದರು.
ವಿಧಾನಸಭೆ ಚುನಾವಣೆಯಲ್ಲಿ ಸೌಮ್ಯರೆಡ್ಡಿಗೆ ಅನ್ಯಾಯವಾಗಿದೆ, ಬಿಜೆಪಿ ಕುತಂತ್ರದಿಂದ ಸೋಲಿಸಿದ್ದಾರೆ,ಇದರಲ್ಲಿ ತೇಜಸ್ವಿ ಸೂರ್ಯನ ಕೈವಾಡ ಇದೆ,ಇಂತಹ ಕುತಂತ್ರಿ ಅಭ್ಯರ್ಥಿ ತೇಜಸ್ವಿಸೂರ್ಯನನ್ನುಅವರಿಗೆ ಇಲ್ಲಿ ಟಿಕೆಟ್ ಕೊಟ್ಟಿದ್ದಾರೆ. ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಪ್ರಜ್ಞಾವಂತ ಮತದಾರರು ಬಿಜೆಪಿ ಅಭ್ಯರ್ಥಿ ಗೆ ಇಲ್ಲಿಂದಲೂ ನೀವು ವಾಪಸ್ ಮನೆಗೆ ಕಳುಹಿಸಿ’ ಅನ್ಯಾಯವಾಗಿರುವ ನಿಮ್ಮ ಮನೆಯ ಮಗಳಿಗೆ ಹೆಚ್ಚಿನ ಮತಗಳನ್ನು ನೀಡುವ ಮೂಲಕ ಗೆಲ್ಲಿಸುವಂತೆ ಮನವಿ ಮಾಡಿದರು.
ಪದ್ಮನಾಭನಗರ ಮತ್ತು ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರಗಳಲ್ಲಿ ವ್ಯಕ್ತವಾದ ಭರ್ಜರಿ ಜನ ಬೆಂಬಲಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಗಳು ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಭಯಾನಕ ಬಿಜೆಪಿ ವಿರೋಧಿ ಅಲೆ ಇದೆ. ಸೌಮ್ಯ ರೆಡ್ಡಿ ಭಾರೀ ಅಂತರದಲ್ಲಿ ಗೆಲ್ಲುತ್ತಾರೆ. ಈ ಮಾತನ್ನು ನಾನು ಸುಮ್ಮನೆ ಹೇಳುತ್ತಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.
ಇದೇ ಸಂದರ್ಭದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯರೆಡ್ಡಿ ಮಾತನಾಡಿ ನಮ್ಮೆಲ್ಲರ ಸೇವೆಯನ್ನು ಪ್ರಾಮಾಣಿಕವಾಗಿ ಹಾಗೂ ನಿಷ್ಠೆಯಿಂದ ಮಾಡುತ್ತಿನಿ, ನುಡಿದಂತೆ ನಡೆಯುವ ನಮ್ಮ ಸರ್ಕಾರದ ಯೋಜನೆಗಳನ್ನು ಸಹಕಾರಗೊಳಿಸಲು ಮತ್ತು ಬಿಜೆಪಿ ದುರಾಡಳಿತಕ್ಕೆ ತಕ್ಕ ಪಾಠಕಲಿಸಲು ನಿಮ್ಮ ಮತಬಿಕ್ಷೆಯನ್ನು ಕೇಳುತ್ತಿದ್ದಿನಿ ದಯವಿಟ್ಟು ನಿಮ್ಮ ಮನೆ ಮಗಳಿಗೆ ಆಶೀರ್ವದಿಸಿ ಗೆಲ್ಲಿಸಿ ಎಂಬುದಾಗಿ ಮತ ಯಾಚಿಸಿದರು.
ಇದೇ ಸಂದರ್ಭದಲ್ಲಿ ಬೊಮ್ಮನಹಳ್ಳಿ ಹಿರಿಯ ಕಾಂಗ್ರೆಸ್ ಮುಖಂಡರಾದ ನಾಗಭೂಷಣ್ ರೆಡ್ಡಿ, ಕೆಪಿಸಿಸಿ ಪ್ರಚಾರ ಸಮಿತಿ ಸದಸ್ಯರಾದ ಕೆ.ವಾಸುದೇವಾರೆಡ್ಡಿ, ಕಾಂಗ್ರೆಸ್ ಮುಖಂಡರಾದ ಉಮಾಪತಿ ಶ್ರೀನಿವಾಸ್ ಗೌಡ, ಹೆಚ್.ಎಸ್.ಆರ್. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ, ಟಿ. ವಾಸುದೇವಾರೆಡ್ಡಿ, ಬೊಮ್ಮನಹಳ್ಳಿ ಬ್ಲಾಕ್ ರವೀಂದ್ರ ಗೌಡ, ಬಿಳೇಕಹಳ್ಳಿ ಅಶ್ವತ್ ನಾರಾಯಣಸ್ವಾಮಿ, ಮಾಜಿ ಬಿಬಿಎಂಪಿ ಸದಸ್ಯ ಶೋಭ ಜಗಧೀಶ್ ಗೌಡ, ಕೆಪಿಸಿಸಿ ಯುವ ಕಾಂಗ್ರೆಸ್ ರಾಜ್ಯ ಸಮಿತಿ ಕಾರ್ಯದರ್ಶಿ ಡಾ.ಅನಿಲ್ ರೆಡ್ಡಿ, ಹಾಜರಿದ್ದರು.