ಆನೇಕಲ್: ಇಂದಿನ ದಿನಗಳಲ್ಲಿ ಯುವಜನತೆ ದುಶ್ಚಟಗಳಿಗೆ ಒಳಗಾಗದೆ, ಸಮಾಜದ ಸೇವೆಯಲ್ಲಿ ತೊಡಗಿಸಿಕೊಳ್ಳಬೇಕು. ಶಿಕ್ಷಣ ಪಡೆದು ಸ್ವಾವಲಂಬಿಯಾಗಿ ಬೆಳೆಯುವುದರ ಜೊತೆಗೆ ಇನ್ನೊಬ್ಬರ ಬದುಕಿಗೂ ಬೆಳಕು ತರಬೇಕು ಎಂದು ಕರ್ನಾಟಕ ದಲಿತ ರಕ್ಷಣ ವೇದಿಕೆ ರಾಜ್ಯಾಧ್ಯಕ್ಷರಾದ ಎಂ.ಸಿ ಹಳ್ಳಿ ಜಿ.ರಾಮಕೃಷ್ಣ ಅವರು ಕರೆ ನೀಡಿದರು.ಅವರು ಪಟ್ಟಣದ ಕರ್ನಾಟಕ ದಲಿತ ರಕ್ಷಣ ವೇದಿಕೆ ರಾಜ್ಯಾಧ್ಯಕ್ಷರಾದ ಎಂ.ಸಿ ಹಳ್ಳಿ ಜಿ.ರಾಮಕೃಷ್ಣ ರವರ 56 ಹುಟ್ಟ ಹಬ್ಬದ ಅಂಗವಾಗಿ ಹಮ್ಮಿಕೊಂಡಿದ್ದ ಸೀರೆ ವಿತರಣೆ, ಅನ್ನದಾಸೋಹ, ಬಡ ಪೌರ ಕಾರ್ಮಿಕರಿಗೆ ಶೈಕ್ಷಣಿಕ ಪ್ರೋತ್ಸಹ ಧನ ವಿತರಣೆ ಕಾರ್ಯಕ್ರಮಗಳನ್ನು ಉದ್ಘಾಟಿಸಿ ಮಾತನಾಡಿದರು.ದಲಿತ ಸಮುದಾಯದ ಹಕ್ಕುಗಳ ರಕ್ಷಣೆ ಹಾಗೂ ಸಾಮಾಜಿಕ ನ್ಯಾಯ ಸಾಧನೆಗಾಗಿ ಕರ್ನಾಟಕ ದಲಿತ ರಕ್ಷಣ ವೇದಿಕೆ ಸದಾ ಹೋರಾಟ ನಡೆಸುತ್ತಿದ್ದು, ಬಡ ಜನರ ಪ್ರಗತಿಗಾಗಿ ನಮ್ಮ ಪ್ರಮುಖ ಗುರಿಯಾಗಿದೆ ಎಂದರು.ಹುಟ್ಟುಹಬ್ಬವನ್ನು ಕೇವಲ ಆಚರಣೆಗಾಗಿ ಮಾತ್ರವಲ್ಲದೆ, ಸಮಾಜದ ಸೇವೆಯ ಮೂಲಕ ಅರ್ಥಪೂರ್ಣವಾಗಿ ಆಚರಿಸುವುದು ನಮ್ಮ ಕರ್ತವ್ಯವಾಗಿದೆ. ಈ ಹಿನ್ನೆಲೆಯಲ್ಲಿ ಸೀರೆ ವಿತರಣೆ, ಅನ್ನದಾಸೋಹ ಮತ್ತು ಬಡ ಪೌರ ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕ ಪ್ರೋತ್ಸಾಹ ಧನ ನೀಡುವಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದೇವೆ ಎಂದು ಹೇಳಿದರು.ಸಮಾಜದಲ್ಲಿ ಸಮಾನತೆ, ಸಹೋದರತ್ವ ಮತ್ತು ಮಾನವೀಯ ಮೌಲ್ಯಗಳು ಬಲವಾಗಬೇಕು. ಪ್ರತಿಯೊಬ್ಬರೂ ತಮ್ಮ ತಮ್ಮ ಮಟ್ಟದಲ್ಲಿ ಸಹಾಯ ಹಸ್ತ ಚಾಚಿದರೆ ಸಮಾಜದಲ್ಲಿ ದೊಡ್ಡ ಮಟ್ಟದ ಬದಲಾವಣೆ ಸಾಧ್ಯವಾಗಿ ದ್ದರು, ಇಂತಹ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ ಎಲ್ಲಾ ಮುಖಂಡರು, ಕಾರ್ಯಕರ್ತರಿಗೆ ಕೃತಜ್ಞತೆ ಸಲ್ಲಿಸಿ, ಮುಂದಿನ ದಿನಗಳಲ್ಲಿ ಇನ್ನಷ್ಟು ಸೇವಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದಾಗಿ ಭರವಸೆ ನೀಡಿದರು.
ಕಾರ್ಯಕ್ರಮದಲ್ಲಿ ಸಂಸ್ಥಾಪಕರು, ಜೈ ಭೀಮ್ ಕರ್ನಾಟಕ ಯುವಕರ ಸಂಘ ಎಂ.ಮಹೇಶ್, ಕರ್ನಾಟಕ ದಲಿತ ರಕ್ಷಣ ವೇದಿಕೆ ಮಹಿಳಾ ರಾಜ್ಯಧ್ಯಕ್ಷೆ ಸಿದ್ದಮ್ಮ, ಬೆಂಗಳೂರು ನಗರ ಜಿಲ್ಲಾಧ್ಯಕ್ಷೆ ಕಮಲಮ್ಮ, ಮುಖಂಡರಾದ ಮುನಿಯಪ್ಪ, ಮುನಿಸ್ವಾಮಿ, ಮಂಜುನಾಥ್, ರಾಜಣ್ಣ ತಲ್ವಾರ್, ಮುನಿರಾಜು, ಪೂಜಾರಿ ಚಿಕ್ಕಣ್ಣ, ಎಂ.ಚAದ್ರಪ್ಪ, ರಾಮಸ್ವಾಮಿ, ಗಂಗಾಧರ್ ಹಾಗೂ ಮತ್ತಿತ್ತರರು ಹಾಜರಿದ್ದರು.
ಯುವಜನತೆ ಶಿಕ್ಷಣ ಪಡೆದು ಸ್ವಾವಲಂಬಿಯಾಗಿ ಬೆಳೆಯುವುದರ ಜೊತೆಗೆ ಇನ್ನೊಬ್ಬರ ಬದುಕಿಗೂ ಬೆಳಕು ತರಬೇಕು: ಜಿ.ರಾಮಕೃಷ್ಣ



