ಇಸ್ಲಾಮಾಬಾದ್: ಅಮೆರಿಕ ಹಾಗೂ ಇರಾನ್ ನಡುವೆ ನಡೆಯಬೇಕಿದ್ದ ಸಂಧಾನ ಮಾತುಕತೆ ಮುಂದೂಡಲಾಗಿದೆ.
ಇಂದು ಮತ್ತು ನಾಳೆ ಪಾಕಿಸ್ತಾನದ ಇಸ್ಲಾಮಾಬಾದ್ನಲ್ಲಿ ಎಡರು ದೇಶದ ನಡುವೆ ಸಂಧಾನ ಮಾತುಕತೆ ನಡೆಯಬೇಕಿತ್ತು. ಆದರೆ ಮಾತುಕತೆಗೆ ಎರಡು ದೇಶಗಳ ನಿಯೋಗ ಬಾರದ ಹಿನ್ನೆಲೆ ಮಾತುಕತೆ ಮುಂದೂಡಲಾಗಿದೆ.
ಇಸ್ರೇಲ್ ಲೆಬನಾನ್ ಮೇಲೆ ನಡೆಸುತ್ತಿರುವ ದಾಳಿಯನ್ನು ಸ್ಥಗಿತಗೊಳಿಸುವವರೆಗೂ ಮಾತುಕತೆಗೆ ಮುಂದಾಗುವುದಿಲ್ಲ ಎಂದು ಇರಾನ್ ಸ್ಪಷ್ಟಪಡಿಸಿದೆ ಎಂದು ಹೇಳಲಾಗಿದೆ.
ಶಾಂತಿ ಸಂಧಾನ ಸಭೆ ಹಿನ್ನೆಲೆಯಲ್ಲಿ ಇಸ್ಲಾಮಾಬಾದ್ನ ಪ್ರಮುಖ ಸ್ಥಳಗಳಲ್ಲಿ ಬಿಗಿ ಭದ್ರತೆ ಏರ್ಪಡಿಸಲಾಗಿತ್ತು. ಇದೀಗ ಲೆಬನಾನ್ ಜತೆ ಶಾಂತಿ ಮಾತುಕತೆಗೆ ಇಸ್ರೇಲ್ ಪ್ರಧಾನಿ ನೇತನ್ಯಾಹು ಒಪ್ಪಿಗೆ ಸೂಚಿಸಿದ್ದಾರೆ ಎಂದು ಹೇಳಲಾಗಿದೆ.
ಅಮೆರಿಕ ಇರಾನ್ ನಡುವಿನ ಮಾತುಕತೆ ಸಂದರ್ಭದಲ್ಲಿ ಪಾಕಿಸ್ತಾನ ಭಾಗವಹಿಸುವುದಿಲ್ಲ. ಅದು ಸಂದೇಶಕಾರನಾಗಿ ಇರುತ್ತದೆ ಎಂದು ಹೇಳಲಾಗಿದೆ.



