ಧಾರವಾಡ: ನವನಗರದ ಭಗಿನಿ ನಿವೇದಿತಾ ವಿದ್ಯಾಲಯ ಪ್ರೌಢಶಾಲೆಯ ವಿದ್ಯಾರ್ಥಿಗಳು ಇತ್ತೀಚೆಗೆ ನಡೆದ ಹುಬ್ಬಳ್ಳಿ ಗ್ರಾಮೀಣ ವಿಭಾಗದ ತಾಲೂಕು ಮಟ್ಟದ ಅಥ್ಲೆಟಿಕ್ಸ್ ಸ್ಪರ್ಧೆಯಲ್ಲಿ ಉತ್ತಮ ಸಾಧನೆ ಮಾಡಿದ್ದಾರೆ. ನಮ್ಮ ಶಾಲೆಯ ಕುಮಾರ್ಅಜಯ್ ಬಂಗಾರ ಅವರು ಗುಂಡು ಎಸೆತ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನಗಳಿಸಿ, ಹಾಗೂ ಕುಮಾರ್ ರೋಚಕ್ ಎ.ಪಿ. ಅವರು ೧೧೦ ಮೀಟರ್ ಅಡೆತಡೆ ಓಟದಲ್ಲಿ ದ್ವಿತೀಯ ಸ್ಥಾನ ಗಳಿಸಿ ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಗಳ ಸಾಧನೆಗೆ ಆಡಳಿತ ಮಂಡಳಿ, ಮುಖ್ಯೋಪಾಧ್ಯಾಯರು, ಶಿಕ್ಷಕ ವರ್ಗ, ದೈಹಿಕ ಶಿಕ್ಷಣ ಗುರುಗಳು ಹಾಗೂ ವಿದ್ಯಾರ್ಥಿಗಳು ಶುಭಹಾರೈಸಿದ್ದಾರೆ.
“ಭಗಿನಿ ನಿವೇದಿತಾ ವಿದ್ಯಾಲಯ ವಿದ್ಯಾರ್ಥಿಗಳು – ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆ”



