ಕೋಲ್ಕತ್ತಾ: ಭಂಗಾರ್ ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ತೃಣಮೂಲ ಕಾಂಗ್ರೆಸ್ನ ಮಾಜಿ ಶಾಸಕ ಸಾಕತ್ ಮೊಲ್ಲಾ ಅವರನ್ನು ಎನ್ಐಎ ಅಧಿಕಾರಿಗಳು ಬಂಧಿಸಿದ್ದಾರೆ. ಈ ಬಂಧನದಿಂದ ಪ್ರಕರಣದಲ್ಲಿ ಬಂಧಿತರ ಸಂಖ್ಯೆ ನಾಲ್ಕಕ್ಕೆ ಏರಿದೆ.ಸಾಕತ್ ಮೊಲ್ಲಾ ತಲೆಮರೆಸಿಕೊಂಡಿದ್ದಾರೆ ಎಂದು ಘೋಷಿಸಿದ ಕೆಲವೇ ಗಂಟೆಗಳ ನಂತರ ರಾಷ್ಟ್ರೀಯ ತನಿಖಾ ಸಂಸ್ಥೆ ತಡ ರಾತ್ರಿ ಪಶ್ಚಿಮ ಬಂಗಾಳದ ದಕ್ಷಿಣ 24 ಪರ ಗಣ ಜಿಲ್ಲೆಯಲ್ಲಿ ಅವರನ್ನು ಬಂಧಿಸಿದೆ. ಅವರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲು ಸಿದ್ಧತೆ ನಡೆದಿದೆ ಎಂದು ಎನ್ಐಎ ಅಧಿಕಾರಿಯೊಬ್ಬರು ಮಾಧ್ಯಮಗಳಿಗೆ ತಿಳಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಅವರ ಮಗಳು, ನನ್ನ ತಂದೆ ಮನೆಯಲ್ಲಿ ಇರಲಿಲ್ಲ. ಅವರು ವೈಯಕ್ತಿಕ ಕೆಲಸದ ನಿಮಿತ್ತ ಹೊರಗೆ ಹೋಗಿದ್ದರು. ಚಿಂಗ್ರಿಘಾಟ್ ಬಳಿ ಅವರು ಅಧಿಕಾರಿಗಳಿಗೆ ಶರಣಾದರು ಎಂದು ಮಾಹಿತಿ ನೀಡಿದ್ದಾರೆ.



