ದೆಹಲಿ: ಬಿಜೆಪಿಯ ಭೀಷ್ಮ ಎಂದೇ ಕರೆಯಲ್ಪಡುವ ಹಿರಿಯ ಮುಖಂಡ ಮಾಜಿ ಉಪ ಪ್ರಧಾನಿ ಎಲ್.ಕೆ. ಅಡ್ವಾಣಿ ಅವರಿಗೆ `ಭಾರತ ರತ್ನ’ ಪ್ರಶಸ್ತಿ ಘೋಷಿಸಲಾಗಿದೆ.ಕೇಂದ್ರ ಸರ್ಕಾರದ ವತಿಯಿಂದ ಪ್ರಶಸ್ತಿ ಪ್ರಕಟಿಸಲಾಗಿದೆ.
ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಟ್ವಿಟರ್ನಲ್ಲಿ ಮಾಹಿತಿ ಹಂಚಿಕೊಂಡಿದ್ದು, ದೇಶದ ಅಭಿವೃದ್ಧಿಗೆ ಎಲ್.ಕೆ. ಅಡ್ವಾಣಿ ಅವರ ಕೊಡುಗೆ ಅಪಾರವಾಗಿದೆ ಎಂದಿದ್ದಾರೆ. ಅಡ್ವಾಣಿಯವರು ದೇಶಕ್ಕಾಗಿ ಸಲ್ಲಿಸಿರುವ ಸೇವೆ, ಕೊಡುಗೆಗಳ ಬಗ್ಗೆ ಶ್ಲಾಘನೆ ವ್ಯಕ್ತಪಡಿಸಿರುವ ಪ್ರಧಾನಿಯವರು ಈ ವಿಷಯವನ್ನು ಹಂಚಿಕೊಳ್ಳಲು ತಮಗೆ ತೀವ್ರ ಸಂತೋಷವಾಗುತ್ತಿದೆ ಎಂದು ಹೇಳಿದ್ದಾರೆ.
ಈ ಕುರಿತು ನಾನು ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿ ವಿಷಯ ಹಂಚಿಕೊಂಡಿದ್ದು ಅದನ್ನು ಕೇಳಿ ಅವರು ಬಹಳ ಖುಷಿಪಟ್ಟರು ಎಂದು ಪ್ರಧಾನಿ ಮೋದಿ ಟ್ವೀಟ್ನಲ್ಲಿ ಹೇಳಿದ್ದಾರೆ.ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕಾಗಿ ಅವಿರಥ ಶ್ರಮ ಪಟ್ಟಿದ್ದ ಅಡ್ವಾಣಿಜೀ. ಭಾರತೀಯ ಜನತಾ ಪಕ್ಷವನ್ನು ತಳಮಟ್ಟದಿಂದ ಸಂಘಟಿಸಿ ಕೇಂದ್ರದಲ್ಲಿ ಅಧಿಕಾರಕ್ಕೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.
ಇತ್ತೀಚೆಗಷ್ಟೇ ಬಿಹಾರದ ಮುಖ್ಯಮಂತ್ರಿಯಾಗಿದ್ದ ದಿವಂಗತ ಕರ್ಪೂರಿ ಠಾಕೂರ್ ಅವರಿಗೆ ಭಾರತ ರತ್ನ ಘೋಷಣೆ ಮಾಡಿದ ಬೆನ್ನಲ್ಲೆ ಅಡ್ವಾಣಿಯವರಿಗೆ ಭಾರತ ರತ್ನ ಪ್ರಶಸ್ತಿ ಘೋಷಣೆ ಮಾಡಲಾಗಿದೆ.