ಕೋಗಿಲು ಉಳಿಸಿ ಅಕ್ರಮ ವಲಸಿಗರನ್ನು ತೊಲಗಿಸಿ ಎಂದು ರಾಜ್ಯ ಸರ್ಕಾರದ ವಿರುದ್ಧ ಭಾರತೀಯ ಜನತಾ ಪಾರ್ಟಿ ಇಂದು ಪ್ರತಿಭಟನೆ ನಡೆಸಿತು. ಪ್ರತಿಭಟನೆಯಲ್ಲಿ ವಿರೋಧ ಪಕ್ಷದ ನಾಯಕ ಆರ್.ಅಶೋಕ್, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ, ಶಾಸಕರಾದ ಡಾ.ಸಿ.ಎನ್.ಅಶ್ವಥ್ ನಾರಾಯಣ್, ವಿಶ್ವನಾಥ್, ಬಿಜೆಪಿ ಉತ್ತರ ಘಟಕದ ಅಧ್ಯಕ್ಷ ಎಸ್.ಹರೀಶ್ ಹಾಗೂ ಇತರರು ಹಾಜರಿದ್ದರು.



