ಬೆಂಗಳೂರು : ಭ್ರಷ್ಟರ ವಿರುದ್ಧ ಸಮರ ಸಾರಿರುವ ಲೋಕಾಯುಕ್ತ ಅಧಿಕಾರಿಗಳು ಇಂದು ಮುಂಜಾನೆ ಹಲವು ಜಿಲ್ಲೆಗಳಲ್ಲಿ ದಾಳಿ ನಡೆಸಿ ಭ್ರಷ್ಟ ಅಧಿಕಾರಿಗಳನ್ನು ಬಲೆಗೆ ಕೆಡವಿದ್ದಾರೆ.ಕಲಬುರಗಿ, ದಾವಣೆಗೆರೆ, ಚಿತ್ರದುರ್ಗ, ಚಿಕ್ಕಮಗಳೂರು ಸೇರಿ ವಿವಿಧ ಜಿಲ್ಲೆಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಿ ಆದಾಯ ಮೀರಿ ನೂರಾರು ಪಟ್ಟು ಅಕ್ರಮ ಆಸ್ತಿಗಳಿಸಿದ ಅಧಿಕಾರಿಗಳನ್ನು ಬೇಟೆಯಾಡಿ ಕೋಟ್ಯಂತರ ಮೌಲ್ಯದ ಅಕ್ರಮ ಆಸ್ತಿಪಾಸ್ತಿಯನ್ನು ಲೋಕಾಯುಕ್ತ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ದಾವಣಗೆರೆ ಲೋಕಾಯುಕ್ತ ಎಸ್ಪಿ ಎಂ.ಎಸ್ ಕೌಲಾಪುರೆ ನೇತೃತ್ವದಲ್ಲಿ ಮೂರು ಅಧಿಕಾರಿಗಳ 12 ತಂಡ ಏಕಕಾಲಕ್ಕೆ 12 ಕಡೆ ದಾಳಿ ನಡೆಸಿದೆ. ಹುಬ್ಬಳ್ಳಿಯಲ್ಲಿ ಕೆಎಸ್ಆರ್ಟಿಸಿ (ವಾಯವ್ಯ) ಮುಖ್ಯ ಮೆಕ್ಯಾನಿಕ್ ಆಗಿರುವ ಸಿದ್ದೇಶ್ವರ ಹೆಬ್ಬಾಳ್ ಅವರಿಗೆ ಸೇರಿದ ವಿವಿಧ ಸ್ಥಳಗಳಲ್ಲಿ 12 ತಂಡ ದಾಳಿ ನಡೆಸಿದೆ. ಸಿದ್ದೇಶ್ವರ ಅವರ ದಾವಣಗೆರೆ ನಗರದ ಆಂಜನೇಯ ಬಡಾವಣೆ ಮನೆ, ಹುಬ್ಬಳ್ಳಿ ಕಚೇರಿ ಸೇರಿ 4 ಕಡೆ ಲೋಕಾಯುಕ್ತ ದಾಳಿ ನಡೆಸಿದೆ. ದಾಳಿ ವೇಳೆ ಸಿದ್ದೇಶ್ವರ ಹೆಬ್ಬಾಳ್ ಮನೆಯಲ್ಲಿ 40 ಲಕ್ಷ ರೂ ನಗದು ಪತ್ತೆಯಾಗಿದೆ.
ಈ ಬೆನ್ನಲ್ಲೇ ಚಿತ್ರದುರ್ಗ ಬಯಲು ಸೀಮೆ ಪ್ರಾಧಿಕಾರದ ಕಾರ್ಯದರ್ಶಿ ಕೃಷ್ಣ ನಾಯ್ಕ್ ಅವರ ಮನೆ ಮೇಲೆ, ದಾವಣಗೆರೆ ನಗರದ ಸಿದ್ದವೀರಪ್ಪ. ಬಡಾವಣೆ ಮನೆ, ಚಿತ್ರದುರ್ಗ ಕಚೇರಿ ಸೇರಿ 5 ಕಡೆ ದಾಳಿಯಾಗಿದೆ.
ಬೆಳಗಾವಿ ಕೆಆರ್ಐಡಿಎಲ್ ಅಧೀಕ್ಷಕ ಇಂಜಿನಿಯರ್ ಸಣ್ಣ ಕೆಂಚಪ್ಪ ಅವರಿಗೆ ಸೇರಿದ ಚಿತ್ರದುರ್ಗದ, ದಾವರಣೆಗೆರೆ, ಬೆಳಗಾವಿಯಲ್ಲಿರುವ ಮನೆಗಳು ಸೇರಿ 5 ಕಡೆ ದಾಳಿ ನಡೆಸಲಾಗಿದೆ.
ಕಲಬುರಗಿಯಲ್ಲಿ ಪಂಚಾಯತ್ ರಾಜ್ ನಿವೃತ್ತ ಇಂಜನಿಯರ್ ಸೂಪರಿಡೇಂಟ್ ಮನೆ ಮೇಲೆ ಲೋಕಾಯುಕ್ತ ಎಸ್ಪಿ ಸಿದ್ದರಾಜು ನೇತೃತ್ವದ ತಂಡ ದಾಳಿ ನಡೆಸಿದೆ. ನಗರದ ಗೋದುತಾಯಿ ಮನೆ ಸೇರಿ ಐದು ಕಡೆ, ಬೀದರ್ ಜಿಲ್ಲೆಯ ಹಳ್ಳಿಖೇಡ ಗ್ರಾಮದ ಮನೆ, ಹುಮ್ನಾಬಾದ್ನ 2 ಕಾಂಪ್ಲೆಕ್ಸ್, ಹಳ್ಳಿಖೇಡ ಗ್ರಾಮದ ತೋಟದ ಮನೆಯ ಮೇಲೆ ದಾಳಿಯಾಗಿದೆ.
ಭ್ರಷ್ಟರಿಗೆ ಬಿಗ್ ಶಾಕ್ ಹಲವೆಡೆ ಲೋಕಾಯುಕ್ತ ದಾಳಿ | ಅಕ್ರಮ ಆಸ್ತಿ ಪಾಸ್ತಿ ಪತ್ತೆಗೆ ದಾಖಲೆ ಪತ್ರ ಪರಿಶೀಲನೆ



