ರಾಮನಗರ: ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಆದೇಶದ ಬೆನ್ನಲ್ಲೇ ಮಧ್ಯರಾತ್ರಿ ಬಿಡದಿ ಬಳಿ ಇರುವ ಬಿಗ್ಬಾಸ್ ಮನೆಯನ್ನು ತೆರೆಯಲಾಗಿದ್ದು ಸ್ಪರ್ಧಿಗಳನ್ನು ಶಿಫ್ಟ್ ಮಾಡಲಾಗಿದೆ. ನಸುಕಿನ ಜಾವ ೨:೪೫ಕ್ಕೆ ಜಿಲ್ಲಾಧಿಕಾರಿ ಯಶವಂತ್ ವಿ ಗುರುಕರ್, ಎಸ್ಪಿ ಶ್ರೀನಿವಾಸ್ ಗೌಡ, ತಹಶಿಲ್ದಾರ್ ತೇಜಸ್ವಿನಿ
ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಆಗಮಿಸಿ ಜಾಲಿವುಡ್ ಸ್ಟುಡಿಯೋದ ಗೇಟ್ ಸೀಲ್ ಓಪನ್ ಮಾಡಿದ್ದಾರೆ.
ಈ ವೇಳೆ ಪ್ರತಿಕ್ರಿಯೆ ನೀಡಿದ ಬೆಂಗಳೂರು ದಕ್ಷಿಣ ಜಿಲ್ಲಾಧಿಕಾರಿ ಯಶವಂತ್ ವಿ ಗುರುಕರ್, ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ನಿರ್ದೇಶನದಂತೆ ತೆರೆದಿದ್ದೇವೆ.
ಜಾಲಿವುಡ್ ಸಂಪೂರ್ಣ ಕಾರ್ಯಾಚರಣೆ ನಡೆಸಲು ಅವಕಾಶ ನೀಡಿಲ್ಲ. ಕೇವಲ ಬಿಗ್ ಬಾಸ್ ಶೋ ಸ್ಪರ್ಧಿಗಳು, ಸಿಬ್ಬಂದಿ ಓಡಾಟ ಹಾಗೂ ಅಗತ್ಯ ವಸ್ತುಗಳ ಬಳಕೆಗೆ ಅವಕಾಶ ಕೊಡಲಾಗಿದೆ. ಬಿಗ್ ಬಾಸ್ ಶೂಟಿಂಗ್ ಆರAಭದ ಬಗ್ಗೆ ನಾಳೆ ತೀರ್ಮಾನ ಆಗಲಿದೆ ಎಂದು ತಿಳಿಸಿದರು.