ಚಿಕ್ಕಬಳ್ಳಾಪುರ: ಚಲಿಸುತ್ತಿದ್ದ ಬೈಕ್ಗೆ ಗುದ್ದಿದ ಕ್ಯಾಂಟರ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಹಾಗೂ ಲಾರಿ ಹೊತ್ತಿ ಉರಿದು ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರದ ರಾಷ್ಟ್ರೀಯ ಹೆದ್ದಾರಿ 44 ರ ಹಾರೋಬಂಡೆ ಬಳಿ ನಡೆದಿದೆ.
ಚಿಕ್ಕಬಳ್ಳಾಪುರ ತಾಲ್ಲೂಕಿನ ಹಾರೋಬಂಡೆ ಗ್ರಾಮದಲ್ಲಿ ಚಲಿಸುತ್ತಿದ್ದ ಬೈಕ್ ಗೆ ಡಿಕ್ಕಿ ಹೊಡೆದ ಕ್ಯಾಂಟರ್ನಿಂದಾಗಿ ಲಾರಿಯಡಿ ಬೈಕ್ ಸಿಲುಕಿ ಬೆಂಕಿ ಹೊತ್ತಿಕೊಂಡಿದೆ.
ಕೂಡಲೇ ಬೆಂಕಿ ಲಾರಿಗೆ ವ್ಯಾಪಿಸಿ ಜೋರಾಗಿ ಉರಿದು ಬೈಕ್ ಸವಾರ ಸಾವನ್ನಪ್ಪಿದ್ದಾರೆ.ಈ ಸಂಬಂಧ ಚಿಕ್ಕಬಳ್ಳಾಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.