ಗುಂಡ್ಲುಪೇಟೆ: ಬೈಕ್ ಸವಾರ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರನೋರ್ವ ಮೃತ ಪಟ್ಟಿರುವ ಘಟನೆ ಮಲ್ಲಯ್ಯನಪುರ ಗೇಟ್ ಬಳಿಯಲ್ಲಿ ಬುಧವಾರ ನಡೆದಿದೆ.
ತಾಲ್ಲೂಕಿನ ಕೂತನೂರು ಗ್ರಾಮದ ಗೋವಿಂದಶೆಟ್ಟಿ ಅವರ ಮಗ ಕೃಷ್ಣ(22) ಮೃತ ಬೈಕ್ ಸವಾರ. ಕೂತನೂರು ಕಡೆಯಿಂದ ಗುಂಡ್ಲುಪೇಟೆ ಕಡೆಗೆ ಬೈಕ್ ನಲ್ಲಿ ಬರುತ್ತಿದ್ದ ವೇಳೆ ಬೈಕ್ ಗೆ ವಿದ್ಯುತ್ ಕಂಬಕ್ಕೆ ಗುದ್ದಿದ ಪರಿಣಾಮ ಸವಾರನ ತಲೆ ತೀವ್ರತರವಾದ ಗಾಯಗಳಾಗಿದೆ ಎಂದು ತಿಳಿದುಬಂದಿದೆ.
ಮಾಹಿತಿ ಅರಿತ ಬೇಗೂರು ಠಾಣೆ ಪೊಲೀಸರು ಕೂಡಲೇ ಆಗಮಿಸಿ 108 ಆಂಬುಲೆನ್ಸ್ ನಲ್ಲಿ ಗಾಯಾಳುವನ್ನು ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿ ಪ್ರಥಮ ಚಿಕಿತ್ಸೆ ನೀಡಿ ನಂತರ ಹೆಚ್ಚಿನ ಚಿಕಿತ್ಸೆಗೆ ಮೈಸೂರಿಗೆ ರವಾನಿಸುವ ಮಾರ್ಗ ಮದ್ಯ ಬೈಕ್ ಸವಾರ ಕೃಷ್ಣ ಮೃತಪಟ್ಟಿದ್ದಾರೆ.ಘಟನೆಯಿಂದ ಬೈಕ್ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಗುಂಡ್ಲುಪೇಟೆ ಪೊಲೀಸರು ಬೈಕ್ ವಶಕ್ಕೆ ಪಡೆದು ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.