ಬೆಂಗಳೂರು: ಕಿಲ್ಲರ್ ಬಿಎಂಟಿಸಿ ಬಸ್ಗೆ ಮತ್ತೊಂದು ಬಲಿಯಾಗಿದೆ. ಮಾರತ್ತಹಳ್ಳಿಯ ವರ್ತೂರು ಮುಖ್ಯ ರಸ್ತೆಯಲ್ಲಿ ಬಿಎಂಟಿಸಿ ವೋಲ್ವೋ ಬಸ್ ಹರಿದು ಬೈಕ್ ಸವಾರ ಮೃತಪಟ್ಟಿದ್ದಾನೆ.ಬೈಕ್ ಸವಾರ ಎಳಂಗೋವನ್ ಸೆಂಕತ್ತವಲ್(43) ಮೃತ ದುರ್ದೈವಿ. ಅಪಘಾತದಿಂದ ಸವಾರನ ತಲೆ ಹಾಗೂ ಮುಖದ ಭಾಗಕ್ಕೆ ಬಲವಾದ ಗಾಯಗಳಾಗಿದ್ದು ಆತನನ್ನು ಆಸ್ಪತ್ರೆಗೆ ಸಾಗಿಸುವ ವೇಳೆ ದಾರಿ ಮಧ್ಯೆ ಪ್ರಾಣ ಹೋಗಿದೆ.
ನಿನ್ನೆ ಬೆಳಗ್ಗೆ 9.30ರ ಸುಮಾರಿಗೆ ಕುಂದಲಹಳ್ಳಿ ಜಂಕ್ಷನ್ ಕಡೆಯಿಂದ ಬೆಳ್ಳಂದೂರಿಗೆ ಮೃತ ಬೈಕ್ ಸವಾರ ಎಳಂಗೋವನ್ ಸೆಂಕತ್ತವಲ್ ತೆರಳುತ್ತಿದ್ದರು.ಅದೇ ಮಾರ್ಗದಲ್ಲಿ ಬರುತ್ತಿದ್ದ ಬಿಎಂಟಿಸಿ ವೊಲ್ವೋ ಬಸ್ ಡಿಕ್ಕಿ ಹೊಡೆದಿದೆ. ಬಸ್ ಡಿಕ್ಕಿ ರಭಸಕ್ಕೆ ಬೈಕ್ ಸವಾರ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು.
ಅಪಘಾತದಿಂದ ತಲೆ ಹಾಗೂ ಮುಖದ ಭಾಗಕ್ಕೆ ಗಂಭೀರ ಗಾಯವಾಗಿತ್ತು. ತಕ್ಷಣ ಆಸ್ಪತ್ರೆಗೆ ಕರೆದೊಯ್ಯುಲಾಗಿದ್ದು ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾನೆ. ಹೆಚ್ಎಎಲ್ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಪಾದಚಾರಿ ಮಹಿಳೆ ಸಾವುಡಿಸೆಂಬರ್ 28ರಂದು ಬಿಎಂಟಿಸಿ ಬಸ್ ಡಿಕ್ಕಿಯಾಗಿ ಪಾದಚಾರಿ ಮಹಿಳೆ ಮೃತಪಟ್ಟಿದ್ದರು. ನಗರದ ಸುಬ್ಬಯ್ಯ ಸರ್ಕಲ್ ಬಳಿ ಪುಷ್ಪ ಎಂಬ ಮಹಿಳೆ ಬಿಎಂಟಿಸಿಗೆ ಡಿಕ್ಕಿಯಾಗಿ ಮೃತಪಟ್ಟಿದ್ದರು.