ಚಾಮರಾಜನಗರ: ಯಳಂದೂರು ತಾಲ್ಲೂಕಿನ ಬಿಳಿಗಿರಿರಂಗನಬೆಟ್ಟದಲ್ಲಿ ಸಂಕ್ರಾಂತಿ ಹಬ್ಬದ ಪ್ರಯುಕ್ತ ನಡೆಯಲಿರುವ ಬಿಳಿಗಿರಿರಂಗನಾಥಸ್ವಾಮಿ ರಥೋತ್ಸವ ಹಾಗೂ ಚಿಕ್ಕ ಜಾತ್ರಾ ಸಂಬಂಧ ಬಿಳಿಗಿರಿರಂಗನಬೆಟ್ಟಕ್ಕೆ ಯಳಂದೂರು ತಾಲ್ಲೂಕಿನ ಗುಂಬಳ್ಳಿ ಮತ್ತು ಚಾಮರಾಜನಗರ ತಾಲ್ಲೂಕಿನ ಹೊಂಡರಬಾಳು ಅರಣ್ಯ ಇಲಾಖೆಯ ಚೆಕ್ಪೋಸ್ಟ್ಗಳ ಮೂಲಕ ದ್ವಿಚಕ್ರ ವಾಹನಗಳಲ್ಲಿ ತೆರಳುವುದನ್ನು ಜನವರಿ 15 ರಿಂದ 16 ರವರೆಗೆ ತಾತ್ಕಾಲಿಕವಾಗಿ ನಿಬರ್ಂಧಿಸಿ ಜಿಲ್ಲಾಧಿಕಾರಿಯವರು ಆದೇಶ ಹೊರಡಿಸಿದ್ದಾರೆ.
ಬಿಳಿಗಿರಿರಂಗನ ಬೆಟ್ಟದಲ್ಲಿ ಜರುಗಲಿರುವ ಬಿಳಿಗಿರಿರಂಗನಾಥಸ್ವಾಮಿ ರಥೋತ್ಸವ ಹಾಗೂ ಚಿಕ್ಕ ಜಾತ್ರಾ ಸಂಬಂಧ ಜಿಲ್ಲೆ, ಹೊರ ಜಿಲ್ಲೆಗಳಿಂದ ಲಕ್ಷಕ್ಕೂ ಅಧಿಕ ಭಕ್ತಾಧಿಗಳು ಸೇರುವ ಸಂಭವವಿದ್ದು, ವಾಹನ ದಟ್ಟಣೆ ಹೆಚ್ಚಾಗಿ ಸಾರ್ವಜನಿಕ ಸಾರಿಗೆ ವಾಹನಗಳ ಸಂಚಾರಕ್ಕೆ ಅಡಚಣೆ ಉಂಟಾಗುವುದರಿಂದ ಮತ್ತು ಸದರಿ ರಸ್ತೆಯು ಅರಣ್ಯ ಪ್ರದೇಶದಿಂದ ಕೂಡಿದ್ದು,
ತುಂಬಾ ಕಡಿದಾದ ಹಾಗೂ ಕಿರಿದಾಗಿರುವುದರಿಂದ ರಸ್ತೆಯ ಸಂಚಾರದಲ್ಲಿ ದಟ್ಟಣೆಯಾಗಿ ಅಪಘಾತಗಳು ಸಂಭವಿಸುವ ಸಾಧ್ಯತೆ ಇರುವುದರಿಂದ ಕರ್ನಾಟಕ ಮೋಟಾರು ವಾಹನಗಳ ಕಾಯ್ದೆ, ನಿಯಮಾವಳಿ ಹಾಗೂ ಸಂಚಾರಿ ನಿಯಂತ್ರಣ ಕಾಯ್ದೆ ಅನ್ವಯ ಬಿಳಿಗಿರಿರಂಗನಬೆಟ್ಟಕ್ಕೆ ಜನವರಿ 15 ರಿಂದ 16ರವರೆಗೆ ಯಳಂದೂರು ತಾಲೂಕಿನ ಗುಂಬಳ್ಳಿ ಮತ್ತು ಚಾಮರಾಜನಗರ ತಾಲೂಕಿನ ಹೊಂಡರಬಾಳು ಅರಣ್ಯ ಇಲಾಖೆಯ ಚೆಕ್ಪೋಸ್ಟ್ಗಳ ಮೂಲಕ ದ್ವಿಚಕ್ರ ವಾಹನಗಳಲ್ಲಿ ತೆರಳುವುದನ್ನು ತಾತ್ಕಾಲಿಕವಾಗಿ ನಿಬರ್ಂಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ಆದೇಶದಲ್ಲಿ ತಿಳಿಸಿದ್ದಾರೆ.