ಬೆಂಗಳೂರು : ಪರಪ್ಪನ ಅಗ್ರಹಾರ ಜೈಲಿನಲ್ಲಿ ಅನುಚಿತ ವರ್ತನೆ ಹಾಗೂ ಅಕ್ರಮ ಚಟುವಟಿಕೆಗಳನ್ನು ಹತ್ತಿಕ್ಕಲು ಪ್ರಿಸನರ್ಸ್ ಟ್ರ್ಯಾಕಿಂಗ್ ಮೂವ್ಮೆಂಟ್ ಸಿಸ್ಟಂ ಪರಿಚಯಿಸಲಾಗಿದ್ದು, ಇನ್ನು ಮುಂದೆ ಪ್ರತಿ ಬ್ಯಾರಕ್ ಪ್ರವೇಶಿಸುವಾಗ ಕೈದಿಗಳಿಗೆ ಬಯೋಮೆಟ್ರಿಕ್ ವ್ಯವಸ್ಥೆ ಕಡ್ಡಾಯ ಪಡಿಸಲಾಗಿದೆ. ಈಗಾಗಲೇ ಜೈಲಿನಲ್ಲಿ ಕೃತಕ ಬುದ್ದಿಮತ್ತೆ (ಎಐ) ಕ್ಯಾಮೆರಾಗಳ ಮೂಲಕ ಕೈದಿಗಳು ಮತ್ತು ಅಧಿಕಾರಿ-ಸಿಬ್ಬಂದಿ ಮೇಲೆ ನಿಗಾವಹಿಸಲಾಗಿತ್ತು. ಇದೀಗ ಅದರೊಂದಿಗೆ ಕೈದಿಗಳ ಫೋನ್ ಕರೆ ವ್ಯವಸ್ಥೆ ಸಂಪೂರ್ಣ ಡಿಜಿಟಲ್ ಟ್ರ್ಯಾಕಿಂಗ್, ಸಂದರ್ಶಕರನ್ನು ಭೇಟಿಯಾಗಲು ಡಿಜಿಟಲ್ ಟೋಕನ್ ಪದ್ಧತಿ ಸೇರಿ ಕಾರಾಗೃಹ ಬಂಧಿಗಳ ಚಲನವಲನಗಳ ಮೇಲೆ ಸಂಪೂರ್ಣ ನಿಗಾ ಇಡಲು ಈ ವ್ಯವಸ್ಥೆ ಜಾರಿಗೆ ತರಲಾಗಿದೆ. ಇದಕ್ಕೆ ಸುಮಾರು 2.25 ಕೋಟಿ ರೂ. ವೆಚ್ಚವಾಗಿದೆ ಎಂದು ಜೈಲಾಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಜೈಲಿನ ಪ್ರತಿ ಬ್ಯಾರಕ್, ಸಂದರ್ಶ ಕರ ಕೊಠಡಿ, ಆಸ್ಪತ್ರೆ, ಕ್ಯಾಂಟೀನ್, ಅಡುಗೆ ಕೋಣೆ, ಗ್ರಂಥಾಲಯ, ಮೈದಾನ, ಕರಕುಶಲ ಕಾರ್ಖಾನೆಗಳು, ಬೇಕರಿ ಸೇರಿ ಎಲ್ಲೆಡೆ ಬಯೋಮೆಟ್ರಿಕ್ ವ್ಯವಸ್ಥೆ ಮಾಡಲಾಗಿದೆ.
ಬ್ಯಾರಕ್ ಪ್ರವೇಶಿಸುವ ಕೈದಿಗಳಿಗೆ ಬಯೋಮೆಟ್ರಿಕ್ ಕಡ್ಡಾಯ



