ಗುವಾಹಟಿ: ಈಶಾನ್ಯ ಭಾರತದ ಹೆಬ್ಬಾಗಿಲು ಎಂದೇ ಕರೆಯಲ್ಪಡುವ ಅಸ್ಸಾಂ ರಾಜ್ಯದ ರಾಜಕೀಯ ಇತಿಹಾಸದಲ್ಲಿ ಹೊಸ ಅಧ್ಯಾಯವೊಂದು ಆರಂಭವಾಗಿದೆ. ಭಾರತೀಯ ಜನತಾ ಪಕ್ಷದ ಹಿರಿಯ ನಾಯಕ ಹಿಮಂತ ಬಿಸ್ವ ಶರ್ಮಾ ಅವರು ಮಂಗಳವಾರ ಅಸ್ಸಾಂನ ಮುಖ್ಯಮಂತ್ರಿಯಾಗಿ ಸತತ ಎರಡನೇ ಬಾರಿಗೆ ಪ್ರಮಾಣ ವಚನ ಸ್ವೀಕರಿಸುವ ಮೂಲಕ ರಾಜ್ಯದ ಚುಕ್ಕಾಣಿ ಹಿಡಿದಿದ್ದಾರೆ. ಈ ಬೆಳವಣಿಗೆಯು ರಾಜ್ಯದಲ್ಲಿ ಬಿಜೆಪಿ ನೇತೃತ್ವದ ರಾಷ್ಟಿçÃಯ ಪ್ರಜಾಸತ್ತಾತ್ಮಕ ಒಕ್ಕೂಟ ಸರ್ಕಾರದ ಸತತ ಮೂರನೇ ಅವಧಿಯ ಆಡಳಿತಕ್ಕೆ ನಾಂದಿ ಹಾಡಿದೆ.
ಗುವಾಹಟಿಯ ಖಾನಾಪಾರಾದಲ್ಲಿರುವ ಪಶುವೈದ್ಯಕೀಯ ಕಾಲೇಜು ಮೈದಾನವು ಈ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಯಿತು. ಅತ್ಯಂತ ಕಟ್ಟುನಿಟ್ಟಿನ ಭದ್ರತೆ ಮತ್ತು ವರ್ಣರಂಜಿತ ಸಿದ್ಧತೆಗಳ ನಡುವೆ ನಡೆದ ಈ ಸಮಾರಂಭದಲ್ಲಿ ದೇಶದ ಗಣ್ಯಾತಿಗಣ್ಯರು ಪಾಲ್ಗೊಂಡಿದ್ದರು. ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಉಪಸ್ಥಿತಿಯು ಈ ಕಾರ್ಯಕ್ರಮಕ್ಕೆ ಹೆಚ್ಚಿನ ಮೆರುಗು ನೀಡಿತು.
2ನೇ ಬಾರಿಯಾಗಿ ಅಸ್ಸಾಂ ಸಿಎಂ ಆಗಿ ಬಿಸ್ವ ಪ್ರಮಾಣ



