ಬೆಂಗಳೂರು: ಹುಬ್ಬಳ್ಳಿಯಲ್ಲಿ ನಡೆದ ವಿದ್ಯಾರ್ಥಿನಿ ನೇಹಾ ಹತ್ಯೆ ಖಂಡಿಸಿ ರಾಜ್ಯಾದ್ಯಂತ ಬಿಜೆಪಿ ವತಿಯಿಂದ ವ್ಯಾಪಕ ಪ್ರತಿಭಟನೆ ನಡೆದಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸರಿಯಿಲ್ಲ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ.
ಮೈಸೂರಿನಲ್ಲಿ ಪ್ರತಿಭಟನೆಗೆ ಅವಕಾಶ ನೀಡದೆ ಹೋದರು ಸಹ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗಿದೆ. ಮೈಸೂರಿನ ಗಾಂಧಿ ವೃತ್ತದಲ್ಲಿ ಪ್ರತಿಭಟನೆ ನಡೆದಿದ್ದು, ಪ್ರತಿಭಟನಾಕಾರರು ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದ್ದಾರೆ. ವಿಜಯೇಂದ್ರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಶಾಸಕ ಶ್ರೀವತ್ಸ, ಮೈಸೂರು ನಗರ ಬಿಜೆಪಿ ಘಟಕದ ಅಧ್ಯಕ್ಷ ನಾಗೇಂದ್ರ ಮತ್ತಿತರರು ಪಾಲ್ಗೊಂಡಿದ್ದರು.
ಧಾರವಾಡದ್ಲಲೂ ಸಹ ಪ್ರತಿಭಟನೆ ನಡೆದಿದ್ದು, ಪ್ರತಿಭಟನಾಕಾರರು ರಸ್ತೆ ತಡೆ ನಡೆಸಿ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದ್ದಾರೆ. ಇದೇ ಸಂದರ್ಭದಲ್ಲಿ ಪ್ರತಿಭಟನೆ ನಡೆಸುತ್ತಿದ್ದವು. ರಸ್ತೆ ಮಧ್ಯೆ ಟೈರ್ಗೆ ಬೆಂಕಿ ಹಚ್ಚಿ ತಮ್ಮ ಆಕ್ರೋಶ ಹೊರ ಹಾಕಿದ್ದಾರೆ. ವಿವಿಧ ಜಿಲ್ಲೆಗಳಲ್ಲಿ ಸ್ಥಳೀಯ ಬಿಜೆಪಿ ಮುಖಂಡರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗಿದೆ.
ಪ್ರತಿಭಟನೆಗೆ ಸಂಬಂಧಪಟ್ಟಂತೆ ಪ್ರತಿಕ್ರಿಯಿಸಿ ರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಬಿಜೆಪಿಯವರಿಗೆ ಬೇರೆ ವಿಚಾರವಿಲ್ಲ. ಡಬಲ್ ಇಂಜಿನ್ ಸರ್ಕಾರ ಫೇಲೂರಾಗಿದೆ ಎಂದು ಆರೋಪಿಸಿದ್ದಾರೆ.ಮೈಸೂರಿನಲ್ಲಿ ಪ್ರತಿಭಟನೆ ವೇಳೆ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನೇಹಾ ಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸಿ ಎಂದು ಆಗ್ರಹ ಪಡಿಸಿದ್ದಾರಲ್ಲದೆ ಮೃತಳ ಕುಟುಂಬಕ್ಕೆ ಸಾಂತ್ವನ ಹೇಳಲು ಮುಖ್ಯಮಂತ್ರಿಯವರು ಮುಂದಾಗಿಲ್ಲ ಎಂದು ಹೇಳಿದ್ದಾರೆ.